ರೇಬಿಸ್ ತಡೆಗೆ ನಾಯಿಗಳಿಗೆ ಸಾಮೂಹಿಕ ಚಿಕಿತ್ಸಾ ಕೈಗೊಳ್ಳಿ

0
293

ಬಳ್ಳಾರಿ,ಮಾ.24: ರೇಬಿಸ್ ಕಾಯಿಲೆ ಹರಡದಂತೆ ನಿಯಂತ್ರಿಸಲು ಸಾಮೂಹಿಕವಾಗಿ ಆಂದೋಲನದ ರೂಪದಲ್ಲಿ ನಾಯಿಗಳಿಗೆ ಚಿಕಿತ್ಸೆ(ವ್ಯಾಕ್ಸಿನೇಷನ್) ನೀಡುವ ನಿಟ್ಟಿನಲ್ಲಿ ಸಂಬಂಧಿಸಿದ ಅಧಿಕಾರಿಗಳು ಕ್ರಮಕೈಗೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಪಿ.ಎಸ್.ಮಂಜುನಾಥ ಅವರು ಹೇಳಿದರು.
ನಗರದ ಜಿಲ್ಲಾಧಿಕಾರಿ ಕಚೇರಿಯ ಕೆಸ್ವಾನ್ ವಿಡಿಯೋ ಕಾನ್ಪರೆನ್ಸ್ ಸಭಾಂಗಣದಲ್ಲಿ ಬುಧವಾರ ಆಯೋಜಿಸಿದ್ದ ಜಿಲ್ಲಾ ರೇಬಿಸ್ ನಿಯಂತ್ರಣ ಕಾರ್ಯಕ್ರಮ ಹಾಗೂ ಕೋಟ್ಪಾ ಕಾಯ್ದೆ ಅನುಷ್ಠಾನ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ನಾಯಿಗಳ ಸಂತಾನೋತ್ಪತ್ತಿ ತಡೆಗಟ್ಟಲು ಕ್ರಮಕೈಗೊಳ್ಳುವುದು. ರೇಬಿಸ್ ಕಾಯಿಲೆವುಳ್ಳ ಪ್ರಾಣಿಗಳು ಸತ್ತರೆ ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯೊಂದಿಗೆ ಸೂಕ್ತ ರೀತಿಯಲ್ಲಿ ಪ್ರಾಣಿಗಳನ್ನು ಮಣ್ಣು ಮಾಡುವ ಕಾಂiÀರ್i ನಡೆಯಲಿ ಎಂದು ಅವರು ತಿಳಿಸಿದರು.
ಈ ಎಲ್ಲಾ ವಿಷಯಗಳ ಕುರಿತು ತಾಲೂಕುಮಟ್ಟದಲ್ಲಿ ತಹಸೀಲ್ದಾರ್ ಅವರ ಅಧ್ಯಕ್ಷತೆಯಲ್ಲಿ ಆರೋಗ್ಯ ಇಲಾಖೆ, ಪಶುಪಾಲನಾ ಮತ್ತು ವೈದ್ಯಕೀಯ ಇಲಾಖೆಯೊಂದಿಗೆ ಸಭೆ ನಡೆಸಿ ಸೂಕ್ತ ಕ್ರಮಕೈಗೊಳ್ಳುವಂತೆ ಅವರು ಸೂಚಿಸಿದರು.
ಆರೋಗ್ಯ ಇಲಾಖೆಯು ಎಲ್ಲಾ ಆರೋಗ್ಯ ಕೇಂದ್ರಗಳಿಗೆ ಅಗತ್ಯವಿದ್ದಷ್ಟು ಎಆರ್‍ವಿ ದಾಸ್ತಾನು ನಿರ್ವಹಿಸುವುದು, ನಾಯಿ ಕಡಿತದಿಂದ ಉಂಟಾಗುವ ತೊಂದರೆ ಮತ್ತು ನಾಯಿ ಕಡಿತದ ನಂತರ ತೆಗೆದುಕೊಳ್ಳಬೇಕಾದ ಪರಿಹಾರ ಕ್ರಮಗಳ ಬಗ್ಗೆ ಜನರಿಗೆ ತಿಳಿಸುವ ಕಾರ್ಯ ಆರೋಗ್ಯ ಇಲಾಖೆ ಮಾಡಬೇಕು. ಇದರ ವರದಿಗಳನ್ನು ತಮ್ಮ ವ್ಯಾಪ್ತಿಯ ಪ್ರತಿ ಮಾಸಿಕ ಸಭೆಗಳಲ್ಲಿ ಇತರೆ ಸ್ಥಳೀಯ ಸಂಸ್ಥೆಗಳೊಂದಿಗೆ ಸಮನ್ವಯ ಸಾಧಿಸಿ ಚರ್ಚಿಸಿ ಕ್ರಮಕೈಗೊಳ್ಳುವಂತೆ ತಿಳಿಸಿದರು.
ಸಭೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ನಿರ್ವಹಿಸಬೇಕಾದ ಕ್ರಮಗಳನ್ನು ಸರಿಯಾದ ರೀತಿಯಲ್ಲಿ ನಿರ್ವಹಿಸಿ ಎಂದು ಅವರು ಸೂಚಿಸಿದರು.

ಕೋಟ್ಪಾ ಕಾಯ್ದೆ ಪರಿಣಾಮಕಾರಿ ಅನುಷ್ಟಾನಕ್ಕೆ ಸೂಚನೆ: ಜಿಲ್ಲೆಯಲ್ಲಿ ಕೋಟ್ಪಾ ಕಾಯ್ದೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಎಡಿಸಿ ಮಂಜುನಾಥ ಅವರು ಸೂಚಿಸಿದರು.
ಸರಕಾರಿ ಕಚೇರಿಗಳು,ಆಸ್ಪತ್ರೆಗಳು ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ಸಿಗರೇಟು ಮತ್ತು ತಂಬಾಕು ಸೇವನೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಕೋಟ್ಪಾ ಕಾಯ್ದೆಯನ್ನು ಅತ್ಯಂತ ಪರಿಣಾಮಕಾರಿಯಾಗಿ ಅನುಷ್ಟಾನಕ್ಕೆ ತನ್ನಿ ಎಂದು ಹೇಳಿದ ಅವರು ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಮತ್ತು ಸಿಗರೇಟ್ ಮಾರಾಟ ಮಾಡಿದವರು ಕಂಡು ಬಂದಲ್ಲಿ ಅಂತವರ ವಿರುದ್ಧ ಪ್ರಕರಣ ದಾಖಲಿಸಲಾಗುತ್ತದೆ. ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಕಾಯ್ದೆಯ ಕುರಿತು ಅರಿವು ಮೂಡಿಸಲು ನಾಮಫಲಕಗಳನ್ನು ಅಳವಡಿಸುವಂತೆ ಅವರು ಅಧಿಕಾರಿಗಳಿಗೆ ಹೇಳಿದರು.
ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಹೆಚ್.ಎಲ್.ಜನಾರ್ಧನ್,ಜಿಲ್ಲಾ ಶಸ್ತ್ರಚಿಕಿತ್ಸಕರಾದ ಡಾ.ಬಸರೆಡ್ಡಿ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಮರಿಯಂಬಿ,ಮಹಾನಗರ ಪಾಲಿಕೆಯ ವೈದ್ಯಾಧಿಕಾರಿ ಡಾ.ಹನುಮಂತಪ್ಪ  ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಮತ್ತು ಇತರರು ಇದ್ದರು.

Previous articleಥಿಯೇಟರ್‍ಗೆ ಬರುತ್ತಿದೆ ನನ್ ಗುರಿ ವಾರೆಂಟ್
Next articleಜಿಪಂ ಕೋರಂ ಇಲ್ಲ: ಸಭೆ ರದ್ದು

LEAVE A REPLY

Please enter your comment!
Please enter your name here