ಬಳ್ಳಾರಿ: ಶರಣೆ ಸಕ್ಕರೆ ಕರಡೀಶ ಸೌಹಾರ್ದ ಪತ್ತಿನ ಸಹಕಾರ ಸಂಘ, ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಯ ಬಣಜಿಗ ಸಮಾಜದ ಸಹಯೋಗದಲ್ಲಿ ಪ್ರತಿಭಾ ಪುರಸ್ಕಾರ ಅಭಿನಂದನಾ ಸಮಾರಂಭ ಹಮ್ಮಿಕೊಂಡಿದ್ದು, ಕಾರ್ಯಕ್ರಮದಲ್ಲಿ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ನಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ ಮಾಡಲಾಯಿತು.
ಇದೇ ಸಂದರ್ಭದಲ್ಲಿ ವಿಜಯನಗರ ಜಿಲ್ಲೆಯ ಲಿಂಗನಾಯಕನ ಹಳ್ಳಿ ಪ್ಲಾಟ್ ನ ವಿಶಾಲಾ ಬಿದರಿಕಟ್ಟಿ ಅವರು ಎಸ್ಸೆಸ್ಸೆಲ್ಸಿಯಲ್ಲಿ ಶೇ. 87.68 ಫಲಿತಾಂಶ ಪಡೆದಿದ್ದು, ಅವರನ್ನು ಚಲನಚಿತ್ರ ನಟ ದೊಡ್ಡಣ್ಣ ಅವರು ಸನ್ಮಾನಿಸಿದರು.