ಬೆಳಗಾಯಿತು ವಾರ್ತೆ| www.belagayithu.in
ಬಳ್ಳಾರಿ: ಗುರುವಾರ ಬಳ್ಳಾರಿ ಜಿಲ್ಲಾ ಜೆಡಿಎಸ್ ಕಚೇರಿಯಲ್ಲಿ ಜಿಲ್ಲಾಧ್ಯಕ್ಷರಾದ ಮೀನಳ್ಳಿ ತಾಯಣ್ಣ ಅವರ ನೇತೃತ್ವದಲ್ಲಿ ತಾಲ್ಲೂಕು ಅಧ್ಯಕ್ಷರ ನೂತನ ಆಯ್ಕೆ ಹಾಗೂ ನೇಮಕಾತಿ ಆದೇಶ ಪತ್ರ ವಿತರಣೆ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದಲ್ಲಿ ಕಂಪ್ಲಿ ವಿಧಾನಸಭಾ ಕ್ಷೇತ್ರದ ತಾಲ್ಲೂಕು ಅಧ್ಯಕ್ಷರಾಗಿ ಮರು ಆಯ್ಕೆಯಾದ ಏಳ್ಕೆ ಮೇಘರಾಜ, ಸಂಡೂರು ವಿಧಾನಸಭಾ ಕ್ಷೇತ್ರದ ತಾಲ್ಲೂಕು ಅಧ್ಯಕ್ಷರಾಗಿ ಹೊಸಿಗೇರಪ್ಪ, ಸಿರುಗುಪ್ಪ ತಾಲ್ಲೂಕು ಅಧ್ಯಕ್ಷರಾಗಿ ಶಿವನಾರಾಯಣ ಅವರನ್ನು ಆಯ್ಕೆ ಮಾಡಲಾಯಿತು.
ಇದೇ ವೇಳೆ ಜಿಲ್ಲಾ ಉಪಾಧ್ಯಕ್ಷರಾಗಿ ರಾಮಾಂಜೀನಿ ಹಾಗೂ ಕಂಪ್ಲಿ ವಿಧಾನಸಭಾ ಕ್ಷೇತ್ರದ ಯುವ ಘಟಕದ ಅಧ್ಯಕ್ಷರಾಗಿ ಭರತ್ ಕುಮಾರ್ ಅವರನ್ನು ನೇಮಕ ಮಾಡಿ ಆದೇಶ ಪತ್ರ ವಿತರಿಸಲಾಯಿತು.
ನಂತರ ಮುಂಬರುವ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣೆಗಳ ಕುರಿತು ಚರ್ಚೆ ನಡೆಸಿ, ಪಕ್ಷ ಸಂಘಟನೆಯನ್ನು ಬಲಪಡಿಸುವ ಬಗ್ಗೆ ಮುಖಂಡರು ಅಭಿಪ್ರಾಯ ಹಂಚಿಕೊಂಡರು.
ಈ ಸಂದರ್ಭದಲ್ಲಿ ರಾಜ್ಯ ಮಹಾ ಪ್ರಧಾನ ಕಾರ್ಯದರ್ಶಿ ಸೋಮಪ್ಪ ಕುರೆಕುಪ್ಪ, ಯಲ್ಲನಗೌಡ, ವಿಜಯ್ ಕುಮಾರ್ ಮಧುರೈ, ಬಾಷಾ, ಮಲ್ಲಿಕಾರ್ಜುನ, ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪಾ ಜೆ, ಶಿವಗಂಗಾ, ವಿಜಯ, ಶಮೀಮ್ ಬಾನು, ರಮಾದೇವಿ ಸೇರಿದಂತೆ ಪಕ್ಷದ ಹಲವಾರು ಕಾರ್ಯಕರ್ತರು ಉಪಸ್ಥಿತರಿದ್ದರು.





