ಹಾವೇರಿಯಲ್ಲಿ ಭೀಕರ ಅಪಘಾತ

ಬೆಳಗಾಯಿತು ವಾರ್ತೆ| www.belagayithu.in
ಹಾವೇರಿ: ಹಾವೇರಿ ನಗರ ಬಸ್ ನಿಲ್ದಾಣದಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಬಸ್ ಗಾಗಿ ಕಾದಿದ್ದವರ ಮೇಲೆಯೇ ಸರ್ಕಾರಿ ಬಸ್ ಹರಿದಿದೆ.
ಏಪ್ರಿಲ್ 1ಮುಂಜಾನೆ ಈ ಭೀಕರ ಅಪಘಾತ ಸಂಭವಿಸಿದ್ದು, ಚಾಲಕನ ನಿಯಂತ್ರಣ ತಪ್ಪಿದ ಬಸ್ ನಿಲ್ದಾಣದ ಪ್ಲಾಟ್‌ಫಾರ್ಮ್ ಮೇಲೆ ಬಸ್ಸಿಗಾಗಿ ಕಾಯುತ್ತಿದ್ದ ಪ್ರಯಾಣಿಕರ ಮೇಲೆ ಏಕಾಏಕಿ ನುಗ್ಗಿದೆ.
ಪರಿಣಾಮ ಈ ಘಟನೆಯಲ್ಲಿ ನಾಲ್ವರು ತೀವ್ರವಾಗಿ ಗಾಯಗೊಂಡಿದ್ದಾರೆ. ಅಂತೆಯೇ 2 ವರ್ಷದ ಪುಟ್ಟ ಮಗು ಸಾವನ್ನಪ್ಪಿದೆ ಎಂದು ತಿಳಿದುಬಂದಿದೆ.
ಮೂಲಗಳ ಪ್ರಕಾರ ಬೆಳಗ್ಗೆ ಸುಮಾರು 7 ಗಂಟೆಯ ಸಮಯದಲ್ಲಿ ಈ ಅಪಘಾತ ಸಂಭವಿಸಿದ್ದು, ಬಸ್ ಚಾಲಕನ ಅತಿಯಾದ ವೇಗ ಮತ್ತು ನಿರ್ಲಕ್ಷ್ಯತನವೇ ಘಟನೆಗೆ ಕಾರಣ ಎಂಬುದು ತಿಳಿದುಬಂದಿದೆ.
ಪ್ಲಾಟ್ ಫಾರ್ಮ್ ನಲ್ಲಿ ನಿಲ್ಲಬೇಕಿದ್ದ ಬಸ್ ಏಕಾಏಕಿ ಪ್ಲಾಟ್ ಫಾರ್ಮ್ ದಾಟಿ ಅಲ್ಲಿ ನಿಂತಿದ್ದ ಪ್ರಯಾಣಿಕರ ಮೇಲೆ ಹರಿದಿದೆ.
ಈ ಅಪಘಾತದಲ್ಲಿ ಕೇವಲ ಮಗು ಮಾತ್ರವಲ್ಲದೆ, ಬಂಕಾಪುರ ಪಟ್ಟಣದ ನಿವಾಸಿಗಳಾದ ವಾಸುದೇವ (44), ಹರ್ಷಾ (6) ಹಾಗೂ ಕಾವ್ಯಾಂಜಲಿ (39) ಎಂಬುವವರಿಗೂ ಗಂಭೀರ ಗಾಯಗಳಾಗಿವೆ.
ಇವರೆಲ್ಲರೂ ಸದ್ಯ ಹಾವೇರಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಘಟನೆಯಲ್ಲಿ ಗಾಯಗೊಂಡಿದ್ದ 2 ವರ್ಷದ ಪುಟ್ಟ ಮಗು ಹಜರತ್ ಅಲಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದೆ ಎಂದು ಹೇಳಲಾಗಿದೆ.
ಘಟನೆಯ ಸಿಸಿಟಿವಿ ದೃಶ್ಯಾವಳಿಗಳು ಲಭ್ಯವಾಗಿದ್ದು, ಅಪಘಾತದ ಭೀಕರತೆಯನ್ನು ಸಾರಿ ಹೇಳುತ್ತಿವೆ. ಸಾರ್ವಜನಿಕರು ಚಾಲಕನ ಬೇಜವಾಬ್ದಾರಿತನದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Related Articles

Stay Connected

53,222FansLike
67,874FollowersFollow
12,303FollowersFollow
105,423SubscribersSubscribe
- Advertisement -spot_img

Latest Articles