ಮುಂಬೈ: ಮಹಾರಾಷ್ಟçದ ನೂತನ ಮುಖ್ಯಮಂತ್ರಿ ಏಕನಾಥ್ ಶಿಂಧೆ ಮತ್ತು ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರನ್ನು ಶಿವಸೇನಾ ಅಧ್ಯಕ್ಷ ಉದ್ಧವ್ ಠಾಕ್ರೆ ಇಂದು ಅಭಿನಂದಿಸಿದ್ದಾರೆ.
ನೂತನವಾಗಿ ನೇಮಕಗೊಂಡ ಮುಖ್ಯಮಂತ್ರಿಏಕನಾಥ ಸಿಂಧೆ ಜೀ ಮತ್ತು ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಜೀ ಅವರಿಗೆ ಶುಭಾಶಯಗಳು. ನೀವು ಮಹಾರಾಷ್ಟ್ರಕ್ಕೆ ಒಳ್ಳೆಯ ಕೆಲಸ ಮಾಡಬೇಕೆಂದು ನಾನು ಬಯಸುತ್ತೇನೆ ಎಂದು ಠಾಕ್ರೆ ಟ್ವೀಟ್ ಮಾಡಿದ್ದಾರೆ.
ಬAಡಾಯ ಶಿವಸೇನೆ ನಾಯಕ ಏಕನಾಥ್ ಶಿಂಧೆ ಮಹಾರಾಷ್ಟçದ ೨೦ ನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರೆ, ಬಿಜೆಪಿ ನಾಯಕ ದೇವೇಂದ್ರ ಫಡ್ನವೀಸ್ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು, ಹತ್ತು ದಿನಗಳ ರಾಜಕೀಯ ಬಿಕ್ಕಟ್ಟಿಗೆ ರಾಜ್ಯದಲ್ಲಿ ಕೊನೆಗೂ ತೆರೆ ಬಿದ್ದಿದೆ.