ಕಾಮಗಾರಿ ಪರಿಶೀಲನೆ ಮಾಡಿದ ಆಯುಕ್ತರು

ಬೆಳಗಾಯಿತು ವಾರ್ತೆ| http://belagayithu.in
ಬಳ್ಳಾರಿ: ಮಹಾನಗರ ಪಾಲಿಕೆಯ ಆಯುಕ್ತರಾದ
ಪಿ.ಎಸ್. ಮಂಜುನಾಥ್ ಅವರು ಸೋಮವಾರ ನಗರದ ಮೊದಲನೇ ರೈಲ್ವೆ ಗೇಟ್ ಸಮೀಪ ನಡೆಯುತ್ತಿರುವ ರಸ್ತೆ ಅಭಿವೃದ್ಧಿ ಕಾಮಗಾರಿ ಹಾಗೂ ಗಡಿಯಾರ ಗೋಪುರ ನಿರ್ಮಾಣ ಕಾಮಗಾರಿಯನ್ನು ಭೇಟಿ ನೀಡಿ ಪರಿಶೀಲಿಸಿದರು.
ಪರಿಶೀಲನೆ ವೇಳೆ ಕಾಮಗಾರಿಯ ಪ್ರಗತಿ, ಗುಣಮಟ್ಟ ಹಾಗೂ ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸುವ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿದರು. ಸಾರ್ವಜನಿಕರಿಗೆ ಅನುಕೂಲವಾಗುವಂತೆ ಕಾಮಗಾರಿಯನ್ನು ವೇಗವಾಗಿ ಹಾಗೂ ಗುಣಮಟ್ಟದೊಂದಿಗೆ ಪೂರ್ಣಗೊಳಿಸಲು ಸಂಬಂಧಿತ ಅಧಿಕಾರಿಗಳು ಮತ್ತು ಗುತ್ತಿಗೆದಾರರಿಗೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆಯ ಇಂಜಿನಿಯರಿಂಗ್ ವಿಭಾಗದ ಅಧಿಕಾರಿಗಳು, ಸಿಬ್ಬಂದಿ ಹಾಗೂ ಗುತ್ತಿಗೆದಾರರು ಉಪಸ್ಥಿತರಿದ್ದರು.

Related Articles

Stay Connected

53,222FansLike
67,874FollowersFollow
12,303FollowersFollow
105,423SubscribersSubscribe
- Advertisement -spot_img

Latest Articles