ಬೆಳಗಾಯಿತು ವಾರ್ತೆ |www.belagayithu.in
ಅಮರಾವತಿ: ಆಂಧ್ರಪ್ರದೇಶ ಕಾಂಗ್ರೆಸ್ ಮುಖ್ಯಸ್ಥೆ ವೈ.ಎಸ್ ಶರ್ಮಿಳಾ ರೆಡ್ಡಿ ಅವರು ಗೃಹಬಂಧನದಿಂದ ತಪ್ಪಿಸಿಕೊಳ್ಳಲು ಬುಧವಾರ ರಾತ್ರಿ ವಿಜಯವಾಡದಲ್ಲಿರುವ ತಮ್ಮ ಪಕ್ಷದ ಕಚೇರಿಯಲ್ಲಿಯೇ ಮಲಗಿ ಕಾಲಕಳೆದಿದ್ದಾರೆ. ನಿರುದ್ಯೋಗಿ ಯುವಕರು ಮತ್ತು ವಿದ್ಯಾರ್ಥಿಗಳು ಎದುರಿಸುತ್ತಿರುವ ಸಮಸ್ಯೆಗಳನ್ನು ರಾಜ್ಯ ಸರ್ಕಾರ ಬಗೆಹರಿಸಬೇಕು ಎಂದು ಆಗ್ರಹಿಸಿ ಕಾಂಗ್ರೆಸ್ ಕಾರ್ಯಕರ್ತರು ಸರ್ಕಾರದ ವಿರುದ್ಧ ಪ್ರತಿಭಟನೆಗೆ ಕರೆ ನೀಡಿದ್ದರು. ಪ್ರತಿಭಟನೆಯ ಮುಂದಾಳತ್ವ ವಹಿಸಿದ್ದ ಶರ್ಮಿಳಾ ಅವರನ್ನು ಬಂಧಿಸುವ ಸಾಧ್ಯತೆ ಇದ್ದಿದ್ದರಿಂದ ಅವರು ರಾತ್ರಿ ಪಕ್ಷದ ಕಚೇರಿಯಲ್ಲಿಯೇ ಉಳಿದುಕೊಂಡಿದ್ದರು. ಈ ಬಗ್ಗೆ ಶರ್ಮಿಳಾ ಅವರು ವಿಜಯವಾಡದ ಆಂಧ್ರರತ್ನ ಭವನದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಈ ವೇಳೆ ಕಳೆದ ಐದು ವರ್ಷಗಳಲ್ಲಿ ಯುವಜನರು, ನಿರುದ್ಯೋಗಿಗಳು ಮತ್ತು ವಿದ್ಯಾರ್ಥಿಗಳ ಪ್ರಮುಖ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಸಂಪೂರ್ಣ ವಿಫಲರಾಗಿದ್ದಾರೆ ಎಂದು ಆಕ್ರೋಶ ಹೊರಹಾಕಿದ್ದಾರೆ.
ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.