ಕನ್ನಡ ಶಾಲೆಗಳ ಬಗ್ಗೆ ಸರ್ಕಾರ ಕಾಳಜಿ ವಹಿಸಲಿ

ಬೆಳಗಾಯಿತು ವಾರ್ತೆ | www.belagayithu.in
ಬೆಂಗಳೂರು: ಕನ್ನಡ ಶಾಲೆಗಳ ಬಗ್ಗೆ ರಾಜ್ಯ ಕಾಂಗ್ರೆಸ್‌ ಸರ್ಕಾರ ಕಾಳಜಿ ವಹಿಸಬೇಕು ಎಂದು ಬಿಜೆಪಿ ಆಗ್ರಹಿಸಿದೆ.
ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ರಾಜ್ಯ ಬಿಜೆಪಿ ಘಟಕ, ರಾಜ್ಯದ ಸರ್ಕಾರಿ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಶಿಕ್ಷಣದ ಗುಣಮಟ್ಟ ಕುಸಿಯುತ್ತಿದೆ. ಶಾಲೆಗಳಲ್ಲಿ ದಾಖಲಾತಿ ಶೇ 15 ರಷ್ಟು ಕುಸಿದಿದೆ. ಶಿಕ್ಷಕರ ಕೊರತೆ, ಮೂಲಭೂತ ಸೌಕರ್ಯಗಳ ಸಮಸ್ಯೆಯಿಂದ ಸರ್ಕಾರಿ ಶಾಲೆಗಳತ್ತ ಯಾರೂ ಮುಖಮಾಡುತ್ತಿಲ್ಲ. ಇವುಗಳ ಬಗ್ಗೆ ಕಾಳಜಿ ವಹಿಸಬೇಕಿದ್ದ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಭಾಷಾ ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿದೆ.
ಪರೀಕ್ಷೆ ನಡೆಯುತ್ತಿರುವ ವೇಳೆಯೇ ತ್ರಿಭಾಷಾ ಸೂತ್ರದ ಬಗ್ಗೆ ಅಸಂಬದ್ಧ ಆದೇಶ ಹೊರಡಿಸಿ ಕನ್ನಡ ಪ್ರೇಮ ತೋರುವ ಬದಲು ಕನ್ನಡ ಶಾಲೆಗಳ ದುಸ್ಥಿತಿಗಳ ಬಗ್ಗೆ ರಾಜ್ಯ ಕಾಂಗ್ರೆಸ್‌ ಸರ್ಕಾರ ಅವಲೋಕನ ನಡೆಸಿದ್ದರೆ ಅದರಿಂದ ಕನ್ನಡಕ್ಕೆ ಲಾಭವಾದರೂ ಆಗುತ್ತಿತ್ತು. ಕನ್ನಡವನ್ನು ರಾಜಕೀಯ ಟೂಲ್‌ ಕಿಟ್‌ ಆಗಿ ತೆಗೆದುಕೊಂಡಿರುವುದು ವಿಷಾದನೀಯ ಎಂದೂ ಕುಟುಕಿದೆ.

Related Articles

Stay Connected

53,222FansLike
67,874FollowersFollow
12,303FollowersFollow
105,423SubscribersSubscribe
- Advertisement -spot_img

Latest Articles