ಹಿಂದೂ ಮಹಾ ಗಣಪತಿ ಬೃಹತ್ ಶೋಭಾಯಾತ್ರೆ ಅದ್ದೂರಿ

ಬೆಳಗಾಯಿತು ವಾರ್ತೆ
ಬಳ್ಳಾರಿ: ನಗರದ ಸೆಂಟನರಿ ಹಾಲ್‌ನಲ್ಲಿ ಪ್ರತಿಷ್ಠಾಪಿಸಲಾಗಿದ್ದ ಹಿಂದೂ ಮಹಾ ಗಣಪತಿ ಉತ್ಸವದ ಅಂಗವಾಗಿ ಭಾನುವಾರ ಸಂಜೆ ನಗರದ ಪ್ರಮುಖ ಬೀದಿಗಳಲ್ಲಿ ಬೃಹತ್ ಶೋಭಾಯಾತ್ರೆ ಅದ್ದೂರಿಯಾಗಿ ನಡೆಯಿತು.

ಅಂತರರಾಷ್ಟ್ರೀಯ ಹಿಂದೂ ಪರಿಷತ್ ಹಾಗೂ ರಾಷ್ಟ್ರೀಯ ಭಜರಂಗದಳದ ವತಿಯಿಂದ ಆಯೋಜಿಸಿದ್ದ ಶೋಭಾಯಾತ್ರೆಯಲ್ಲಿ ಗಣೇಶ ಭಕ್ತರು, ಸಾರ್ವಜನಿಕರು ಹಾಗೂ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ವಿವಿಧ ಅಲಂಕಾರಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ಭಕ್ತಿಗೀತೆಗಳೊಂದಿಗೆ ಗಣೇಶನ ಭವ್ಯ ಮೆರವಣಿಗೆ ಗಮನ ಸೆಳೆಯಿತು.

ಸೆಂಟಿನರಿ ಹಾಲ್‌ನಿಂದ ಆರಂಭಗೊಂಡ ಶೋಭಾಯಾತ್ರೆಯು ರಾಯಲ್ ಸರ್ಕಲ್, ಬೆಂಗಳೂರು ರಸ್ತೆ ಮಾರ್ಗವಾಗಿ ಬ್ರೂಸ್ ಪೇಟ್ ಪೊಲೀಸ್ ಠಾಣೆಯ ಮೂಲಕ ಮೋತಿ ಸರ್ಕಲ್ ತಲುಪಿತು. ಮಾರ್ಗದುದ್ದಕ್ಕೂ ಭಕ್ತರು ಗಣೇಶನ ದರ್ಶನ ಪಡೆದು, ಪೂಜೆ ಸಲ್ಲಿಸಿ ಸಂಭ್ರಮಿಸಿದರು.

ಶೋಭಾಯಾತ್ರೆಯ ಹಿನ್ನೆಲೆಯಲ್ಲಿ ಪ್ರಮುಖ ರಸ್ತೆಗಳಲ್ಲಿ ವಿಶೇಷ ಸಿದ್ಧತೆಗಳನ್ನು ಕೈಗೊಳ್ಳಲಾಗಿತ್ತು. ಮೆರವಣಿಗೆಯಲ್ಲಿ ಯುವಕರು ಹಾಗೂ ಭಕ್ತರು ಉತ್ಸಾಹದಿಂದ ಭಾಗವಹಿಸಿ, ಗಣೇಶನಿಗೆ ಜಯಘೋಷ ಮೊಳಗಿಸಿದರು. ವಿವಿಧ ಕಲಾತಂಡಗಳು ಹಾಗೂ ಸಾಂಸ್ಕೃತಿಕ ಪ್ರದರ್ಶನಗಳು ಶೋಭಾಯಾತ್ರೆಯ ಮೆರುಗನ್ನು ಹೆಚ್ಚಿಸಿದವು.

ನಗರದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿದ್ದು, ಶೋಭಾಯಾತ್ರೆ ಸಾಗಿದ ಮಾರ್ಗದುದ್ದಕ್ಕೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದರು. ಯಾವುದೇ ಅಹಿತಕರ ಘಟನೆ ನಡೆಯದಂತೆ ಅಗತ್ಯ ಮುನ್ನೆಚ್ಚರಿಕೆ ಹಾಗೂ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿತ್ತು.

ಅದ್ದೂರಿಯಾಗಿ ನಡೆದ ಶೋಭಾಯಾತ್ರೆಯು ಭಕ್ತರಲ್ಲಿ ಸಂಭ್ರಮ ಮೂಡಿಸುವುದರೊಂದಿಗೆ ಹಿಂದೂ ಮಹಾ ಗಣಪತಿ ಉತ್ಸವಕ್ಕೆ ಅದ್ದೂರಿ ತೆರೆ ಎಳೆಯಿತು.

Related Articles

Stay Connected

53,222FansLike
67,874FollowersFollow
12,303FollowersFollow
105,423SubscribersSubscribe
- Advertisement -spot_img

Latest Articles