11.1 C
New York
Saturday, April 1, 2023

Buy now

spot_img

“ಅಧಿಕಾರಿಗಳ ಮೇಲಿನ ನಿಯಂತ್ರಣವನ್ನು ರಾಜ್ಯ ಸರಕಾರ ಕಳೆದುಕೊಂಡಿದೆ”: ಕಾಂಗ್ರೆಸ್ ಮುಖಂಡ ದಿನೇಶ್ ಗುಂಡೂರಾವ್

ಬೆAಗಳೂರು: ಅಧಿಕಾರಿಗಳ ಮೇಲಿನ ನಿಯಂತ್ರಣವನ್ನು ರಾಜ್ಯ ಸರಕಾರ ಕಳೆದುಕೊಂಡುವುದು ಸ್ಪಷ್ಟವಾಗಿ ಕಂಡುಬರುತ್ತಿದೆ ಎಂದು ಕಾಂಗ್ರೆಸ್ ಮುಖಂಡ ದಿನೇಶ್ ಗುಂಡೂರಾವ್ ತೀಕ್ಷ್ಣ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ಎಸಿಬಿ ಕಾರ್ಯವೈಖರಿ ಬಗ್ಗೆ ಪ್ರಶ್ನೆ ಮಾಡಿದ್ದ ನ್ಯಾಯಮೂರ್ತಿಗಳನ್ನು ಐಪಿಎಸ್ ಅಧಿಕಾರಿಯೊಬ್ಬರು ವರ್ಗಾವಣೆ ನಡೆಸಲು ಮುಂದಾಗುತ್ತಾರೆ ಎಂದರೆ ಸರ್ಕಾರ ಸತ್ತು ಹೋಗಿದೆ ಎಂದರ್ಥ. ಈ ಸರ್ಕಾರದಲ್ಲಿ ಐಎಎಸ್-ಐಪಿಎಸ್ ಗಳು ಹೈಕೋರ್ಟ್ ನ್ಯಾಯಮೂರ್ತಿಗಳನ್ನೇ ವರ್ಗಾವಣೆ ಮಾಡುವಷ್ಟು ಬಲಾಢ್ಯರೆ.? ಹಾಗಾದರೆ ಈ ಸರ್ಕಾರಕ್ಕೆ ಅಧಿಕಾರಿಗಳ ಮೇಲೆ ನಿಯಂತ್ರಣವೇ ಇಲ್ಲವೆ.? ತಮ್ಮ ವರ್ಗಾವಣೆಗೆ ಐಪಿಎಸ್ ಅಧಿಕಾರಿಯೊಬ್ಬರು ಸರ್ಕಾರಿ ಮಟ್ಟದಲ್ಲಿ ಪ್ರಭಾವ ಬೀರುತ್ತಿರುವ ಬಗ್ಗೆ ಸ್ವತಃ ನ್ಯಾಯಮೂರ್ತಿಗಳೇ ಹೇಳಿಕೊಂಡಿದ್ದಾರೆ. ಹಾಗಾದರೆ ಆ ಐಪಿಎಸ್ ಅಧಿಕಾರಿ ನ್ಯಾಯಾಂಗಕ್ಕಿAತ ದೊಡ್ಡವರೆ.? ಸರ್ಕಾರ ನ್ಯಾಯಮೂರ್ತಿಗಳ ಆರೋಪದ ಕುರಿತು ತಕ್ಷಣವೆ ತನಿಖೆಗೆ ಆದೇಶಿಸಲಿಎಂದು ಹೇಳಿದ್ದಾರೆ

Related Articles

LEAVE A REPLY

Please enter your comment!
Please enter your name here

Stay Connected

21,981FansLike
3,752FollowersFollow
0SubscribersSubscribe
- Advertisement -spot_img

Latest Articles