37.6 C
Bellary
Sunday, April 14, 2024

Localpin

spot_img

ಎಫ್​ಎಸ್​ಎಲ್ (FSL) ವರದಿಯಲ್ಲಿ ಸತ್ಯ ಬಹಿರಂಗ

ಬೆಳಗಾಯಿತು ವಾರ್ತೆ |www.belagayithu.in

ಬೆಂಗಳೂರು, ಮಾರ್ಚ್.02: ವಿಧಾನಸೌಧದಲ್ಲಿ ಪಾಕಿಸ್ತಾನ್ ಪರ ಘೋಷಣೆ ಕೂಗಿದ ಪ್ರಕರಣ ಸಂಬಂಧ ಎಫ್​ಎಸ್​ಎಲ್​ ವರದಿ ಹೊರ ಬಿದ್ದಿದ್ದು ಪಾಕಿಸ್ತಾನ್ ಪರ ಘೋಷಣೆ ಕೂಗಿದ್ದು ದೃಢಪಟ್ಟಿದೆ. ನಾಸಿರ್ ಸಾಬ್ ಜಿಂದಾಬಾದ್ ಮತ್ತು ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದಾರೆ. FSL​ನಲ್ಲಿ ಪರಿಶೀಲನೆ ವೇಳೆ ಆಡಿಯೋ ಮತ್ತು ವಿಡಿಯೋವನ್ನು ಎಡಿಟ್ ಮಾಡಿ ಸೇರಿಸಲಾಗಿಲ್ಲ. ಪಾಕ್ ಪರ ಘೋಷಣೆ ಕೂಗಿದ್ದು ನಿಜ ಎಂದು ತಿಳಿದು ಬಂದಿದೆ.

ಎಫ್​ಎಸ್​ಎಲ್ ವರದಿ ಅನ್ವಯ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಪೊಲೀಸರ ತನಿಖೆ ವೇಳೆ ಕೆಲ ಅನುಮಾನಿತ ವ್ಯಕ್ತಿಗಳನ್ನು ವಶಕ್ಕೆ ಪಡೆಯಲಾಗಿತ್ತು. ಈಗಾಗಲೇ ವಶಕ್ಕೆ ಪಡೆದಿದ್ದ ಅನುಮಾನಿತ ವ್ಯಕ್ತಿಗಳ ವಾಯ್ಸ್ ರವಾನೆ ಮಾಡಲಾಗಿದೆ. ಅನುಮಾನಿತರ ಪೈಕಿ ಓರ್ವನನ್ನು ವಶಕ್ಕೆ ಪಡೆಯಲಾಗಿದೆ. ಎಫ್​ಎಸ್​ಎಲ್​ನಿಂದ ವಾಯ್ಸ್ ಮ್ಯಾಚ್ ಮಾಡುವ ಪ್ರಕ್ರಿಯೆ ನಡೆಯುತ್ತಿದೆ. ವಾಯ್ಸ್ ಮ್ಯಾಚ್ ಆದ ಕೂಡಲೇ ಅಧಿಕೃತವಾಗಿ ಆರೋಪಿಯನ್ನು ಬಂಧಿಸಲು ತಯಾರಿ ನಡೆದಿದೆ.

Related Articles

Stay Connected

53,222FansLike
67,874FollowersFollow
12,303FollowersFollow
105,423SubscribersSubscribe
- Advertisement -spot_img

Latest Articles