41.3 C
Bellary
Sunday, April 28, 2024

Localpin

spot_img

ಅತಿಥಿ ಉಪನ್ಯಾಸಕರ ಖಾಯಂ ಇಲ್ಲ

ಬೆಳಗಾಯಿತು ವಾರ್ತೆ | www.belagayithu.in

ಬೆಂಗಳೂರು, ಫೆ.13 : ಅತಿಥಿ ಉಪನ್ಯಾಸಕರನ್ನು ಖಾಯಂಗೊಳಿಸುವ ಬಗ್ಗೆ ವಿಧಾನ ಮಂಡಲ ಅಧಿವೇಶನದಲ್ಲಿ ಚರ್ಚೆಯಾಗಿದೆ. ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ 16 ಸಾವಿರ ಅತಿಥಿ ಉಪನ್ಯಾಸಕರನ್ನು ಖಾಯಂ ಮಾಡುವಂತೆ ಪ್ರಸ್ತಾಪ ಇಟ್ಟಿದ್ದಕ್ಕೆ ರಾಜ್ಯ ಸರ್ಕಾರ ನಿರಾಕರಿಸಿದ್ದು, ಅತಿಥಿ ಉಪನ್ಯಾಸಕರ ಖಾಯಂ ಮಾಡಲು ನಿಯಮಗಳಲ್ಲಿ ಅವಕಾಶ ಇಲ್ಲ ಎಂದು ಸ್ಪಷ್ಟಪಡಿಸಿದೆ.

ವಿಧಾನ ಪರಿಷತ್‌ ಸದಸ್ಯ ಅ. ದೇವೇಗೌಡ ಅವರು ನಿಯಮ 72ರ ಅಡಿ ಅತಿಥಿ ಉಪನ್ಯಾಸಕರನ್ನು ಕಾಯಂ ಮಾಡುವಂತೆ ಗಮನ ಸೆಳೆಯುವ ಸೂಚನೆಯನ್ನು ಮಂಡಿಸಿದರು. ರಾಜ್ಯದಲ್ಲಿರುವ ಕಾಲೇಜು ಶಿಕ್ಷಣ ಇಲಾಖೆಯಲ್ಲಿ ಬರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ 16 ಸಾವಿರ ಅತಿಥಿ ಉಪನ್ಯಾಸಕರನ್ನು ಕಾಯಂ ಮಾಡುವಂತೆ ಪ್ರಸ್ತಾಪಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಉನ್ನತ ಶಿಕ್ಷಣ ಸಚಿವ ಸುಧಾಕರ್, ಖಾಲಿ ಹುದ್ದೆಗೆ ಖಾಯಂ ಮಾಡಲು ನಿಯಮಗಳಲ್ಲಿ ಅವಕಾಶ ಇಲ್ಲ ಎಂದು ಉನ್ನತ ಶಿಕ್ಷಣ ಸಚಿವ ಸುಧಾಕರ್ ಅವರು ಸದನಕ್ಕೆ ಉತ್ತರ ನೀಡಿದರು.

Related Articles

Stay Connected

53,222FansLike
67,874FollowersFollow
12,303FollowersFollow
105,423SubscribersSubscribe
- Advertisement -spot_img

Latest Articles