ಕೋವಿಡ್ ಎರಡನೇ ಅಲೆಯು ಇನ್ನೇನು ಮುಗಿಯುತ್ತಿದೆ ಅನ್ನುವಷ್ಟರಲ್ಲಿ, ಮೂರನೇ ಅಲೆಯ ಭೀತಿ ಕಾಡಲು ಶುರುವಾಗಿದೆ. ನಮಗೆಲ್ಲ ತಿಳಿದಿರುವಂತೆ, ಕೋವಿಡ್ ಮೊದಲ ಅಲೆಗಿಂತ ಎರಡನೆ ಅಲೆಯ ತೀವ್ರತೆ ಹೆಚ್ಚಾಗಿತ್ತು. ಇದರಿಂದಾಗಿ ಸದ್ಯದಲ್ಲೇ ಅಪ್ಪಳಿಸಲಿರುವ ಕೋವಿಡ್ ಮೂರನೆ ಅಲೆ ಕುರಿತಾಗಿ ಜನರಲ್ಲಿ ಆತಂಕ ಹೆಚ್ಚಾಗಿದೆ. ಆಗಸ್ಟ್ ಅಂತ್ಯದೊಳಗಾಗಿ ಭಾರತಕ್ಕೆ ಕೋವಿಡ್ ಮೂರನೇ ಅಲೆ ಅಪ್ಪಳಿಸಲಿದೆ ಎಂದು ಸ್ವತಃ ಭಾರತೀಯ ವೈದ್ಯಕೀಯ ಮತ್ತು ಸಂಶೋಧನಾ ಸಂಸ್ಥೆ (ಐಸಿಎಂಆರ್) ಸ್ಪಷ್ಟಪಡಿಸಿದೆ.
ಇನ್ನು ಈ ಕುರಿತು ಮಾತನಾಡಿರುವ ಭಾರತೀಯ ವೈದ್ಯಕೀಯ ಮತ್ತು ಸಂಶೋಧನಾ ಸಂಸ್ಥೆಯ ಹಿರಿಯ ವಿಜ್ಞಾನಿಗಳಾದ ಸಮಿರನ್ ಪಾಂಡರವರು, “ಆಗಸ್ಟ್ ಅಂತ್ಯದೊಳಗಾಗಿ ಭಾರತಕ್ಕೆ ಕೋವಿಡ್ ಮೂರನೇ ಅಲೆ ಅಪ್ಪಳಿಸುವುದು ಬಹುತೇಕ ಖಚಿತವಾಗಿದೆ. ಆದಕಾರಣ, ಭಾರತದಲ್ಲಿ ಪುನಃ ದಿನನಿತ್ಯ ಲಕ್ಷಂತಾರ ಜನರು ಕೋವಿಡ್ ಸೋಂಕಿಗೆ ಒಳಗಾಗುವ ಸಾಧ್ಯತೆ ಇದೆ. ಆದ್ದರಿಂದ ಎಲ್ಲಾ ರಾಜ್ಯ ಸರ್ಕಾರಗಳು ಈಗಿನಿಂದಲೇ ಕೋವಿಡ್ ಮೂರನೆ ಅಲೆಯನ್ನು ಎದುರಿಸಲು ಸಕಲ ಸಿದ್ಧತೆಗಳನ್ನು ನಡೆಸಿಕೊಳ್ಳಬೇಕು. ಆಗಸ್ಷಷ ಅಂತ್ಯದೊಳಗಾಗಿ ದೇಶದ ಎಲ್ಲಾ ನಾಗರಿಕರಿಗೂ ಕೋವಿಡ್ ಸಾಂಕ್ರಾಮಿಕ ಖಾಯಿಲೆಯನ್ನು ತಡೆಗಟ್ಟುವ ಲಸಿಕೆಯನ್ನು ನೀಡುವುದೇ ನ್ಮಮ ಗುರಿಯಾಗಿದ್ದು, ಈ ನಿಟ್ಟಿನಲ್ಲಿ ಸಾರ್ವಜನಿಕರು ಸಹಕರಿಸಬೇಕು” ಎಂದು ತಿಳಿಸಿದ್ದಾರೆ.