ನವದೆಹಲಿ-ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ ಹೊಸದಾಗಿ 31, ಸಾವಿರದ 122 ಕೊರೋನ ಸೋಂಕು ಪ್ರಕರಣ ವರದಿಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಇದೇ ವೇಳೆ ಫಲಕಾರಿಯಾಗದೇ 290 ರೋಗಿಗಳು ಮೃತಪಟ್ಟಿದ್ದಾರೆ ಎಂದು ಇಲಾಖೆ ವರದಿ ಹೇಳಿದೆ. ಇದುವರೆಗೆ ಮಾರಕ ಸಂಖ್ಯೆಗೆ ದೇಶದಲ್ಲಿ 4 ಲಕ್ಷದ 41 ಸಾವಿರಕ್ಕೂ ಹೆಚ್ಚು ಜನರು ಸೋಂಕಿನಿಂದ ಮೃತಪಟ್ಟಿದ್ದಾರೆ.
ರಾಜ್ಯಗಳ ಪೈಕಿ ಕೇರಳದಲ್ಲಿ ಹೆಚ್ಚು ಪ್ರಕಣಗಳು ವರದಿಯಾಗುತ್ತಿದೆ. ಎರಡನೇ ಲಸಿಕೆಯನ್ನು 8 ವಾರಗಳಿಗೆ ಬದಲಾಗಿ 4 ವಾರದಲ್ಲಿ ನೀಡುವಂತೆ ಕೇರಳ ಹೈಕೋರ್ಟ್ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ರಾಜ್ಯದಲ್ಲಿ ನಿಫಾ ವೈರಸ್ ಸೋಂಕು ಪ್ರಕರಣಗಳು ಹೆಚ್ಚುತ್ತಿರುವುದು ಕಳವಳಕಾರಿಯಾಗಿದೆ.
ಇನ್ನು ದೇಶದಲ್ಲಿ 3ಲಕ್ಷ 92ಸಾವಿರಕ್ಕೂ ಹೆಚ್ಚು ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 42ಸಾವಿರದ 942 ಜನರು ಚೇತರಿಸಿಕೊಂಡಿದ್ದಾರೆ. ದೇಶದಲ್ಲಿ ಕಳೆದ 24 ಗಂಟೆಯಲ್ಲಿ 1ಕೋಟಿ 13,ಸಾವಿರಕ್ಕೂ ಹೆಚ್ಚು ಜನರಿಗೆ ಲಸಿಕೆ ನೀಡಲಾಗಿದ್ದು ಈವರೆಗೆ ದೇಶದಲ್ಲಿ 69ಕೋಟಿ ಜನರಿಗೆ ಲಸಿಕೆ ಹಾಕಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ ಐಸಿಎಂಆರ್ ಮಾಹಿತಿ ನೀಡಿದೆ.