ನಾಳೆ ವಿಎಸ್ ಕೆ ವಿವಿಯ12ನೇ ಘಟಿಕೋತ್ಸವ

ಬೆಳಗಾಯಿತು ವಾರ್ತೆ
ಬಳ್ಳಾರಿ: ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ 2022-23ನೇ ಸಾಲಿನ 12ನೇ ವಾರ್ಷಿಕ ಘಟಿಕೋತ್ಸವ ಕಾರ್ಯಕ್ರಮವು ಸೆ. 6ರಂದು ವಿಶ್ವವಿದ್ಯಾಲಯದ ಬಯಲು ರಂಗಮಂದಿರ ಆವರಣದಲ್ಲಿ ಆಯೋಜಿಸಲಾಗಿದೆ ಎಂದು ವಿವಿಯ ಕುಲಪತಿಗಳಾದ ಪ್ರೊ. ಎಂ. ಮುನಿರಾಜು ಅವರು ಹೇಳಿದರು.

ನಗರದ ವಿಎಸ್ ಕೆ ವಿಶ್ವವಿದ್ಯಾಲಯದ ಪರೀಕ್ಷಾಂಗ ವಿಭಾಗದಲ್ಲಿ ಗುರುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.

ಈ ಬಾರಿಯ ಘಟಿಕೋತ್ಸವದಲ್ಲಿ ಸ್ನಾತಕ ಮತ್ತು ಸ್ನಾತಕೋತ್ತರ ವಿವಿಧ ವಿಭಾಗಗಳ 42 ವಿದ್ಯಾರ್ಥಿಗಳು 53 ಚಿನ್ನದ ಪದಕಗಳನ್ನು ಮುಡಿಗೇರಿಸಿಕೊಳ್ಳಲಿದ್ದಾರೆ. ವಿವಿಧ ವಿಭಾಗಗಳ ಒಟ್ಟು 36 ಸಂಶೋಧನಾರ್ಥಿಗಳು ಡಾಕ್ಟರೇಟ್ ಪದವಿ ಪಡೆಯಲಿದ್ದಾರೆ. ಎಲ್ಲಾ ವಿಭಾಗಗಳ ಸ್ನಾತಕ ಪದವಿಯ 56 ವಿದ್ಯಾರ್ಥಿಗಳು ಮತ್ತು ಸ್ನಾತಕೋತ್ತರ ಪದವಿಯಿಂದ 69 ಒಟ್ಟು 125 ವಿದ್ಯಾರ್ಥಿಗಳು ರ್ಯಾಂಕ್ ಪ್ರಮಾಣ ಪತ್ರಗಳನ್ನು ಪಡೆಯಲಿದ್ದು, ಮೂರು ಜನ ಗೌರವ ಡಾಕ್ಟರೇಟ್ ಪಡೆಯಲಿದ್ದಾರೆ ಎಂದು ಅವರು ಹೇಳಿದರು.
ಘಟಿಕೋತ್ಸವವನ್ನು ಕಾರ್ಯಕ್ರಮವನ್ನು ರಾಜ್ಯಪಾಲರಾದ ಥಾವರ್ ಚಂದ್ ಗೆಹೋಟ್ ಅವರು ಉದ್ಘಾಟಿಸಲಿದ್ದು, ಘಟಿಕೋತ್ಸವದ ಭಾಷಣವನ್ನು ಪ್ರೊ.ಎಸ್ ಎಮ್ ಶಿವಪ್ರಸಾದ್, ಹಿರಿಯ ವಿಜ್ಞಾನಿ ಮತ್ತು ಗೌರವ ಪ್ರಾಧ್ಯಾಪಕರು ಮತ್ತು ಡೀನ್, ಐ.ಐ.ಟಿ, ಧಾರವಾಡ ಇವರು ಮಾಡಲಿದ್ದಾರೆ. ಉನ್ನತ ಶಿಕ್ಷಣ ಸಚಿವರು, ಸಮ-ಕುಲಾಧಿಪತಿಗಳು, ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯ, ಬಳ್ಳಾರಿ ಡಾ. ಎಮ್ ಸಿ ಸುಧಾಕರ್ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದರು.

ಈ ಸಂದರ್ಭದಲ್ಲಿ ಕುಲಸಚಿವರಾದ ಎಸ್.ಎನ್ ರುದ್ರೇಶ್, ಮೌಲ್ಯಮಾಪನ ಕುಲಸಚಿವರಾದ ಪ್ರೊ. ರಮೇಶ್ ಓಲೇಕಾರ್ ಇದ್ದರು.

ಗೌರವ ಡಾಕ್ಟರೇಟ್‌ ಪುರಸ್ಕೃತರು
ಶ್ರೀ ಮತಿ ಉಮಾಶ್ರೀ ( ರಂಗಭೂಮಿ, ಕಲೆ ಮತ್ತು ಸಮಾಜ ಸೇವೆ)
ಎಸ್. ಕೆ ಮೋದಿ. ( ಕೈಗಾರಿಕಾ ಮತ್ತು ಸಮಾಜ ಸೇವೆ)
ಶ್ರೀ ಚಂದ್ರಮೌಳೇಶ್ವರ ಶಿವಾಚಾರ್ಯ ಸ್ವಾಮೀಜಿ. ( ಶಿಕ್ಷಣ)

Related Articles

Stay Connected

53,222FansLike
67,874FollowersFollow
12,303FollowersFollow
105,423SubscribersSubscribe
- Advertisement -spot_img

Latest Articles