ಬೆಳಗಾಯಿತು ವಾರ್ತೆ | www.belagayithu.in
ಭಾರತೀಯ ಕ್ರಿಕೆಟ್ ತಂಡವು , 2024ರ ಅಂಡರ್ 19 ವಿಶ್ವಕಪ್‌ನ ಫೈನಲ್‌ನಲ್ಲಿ (U19 World Cup 2024) ಆಸ್ಟ್ರೇಲಿಯಾವನ್ನು ಎದುರಿಸಲಿದೆ. ಟೂರ್ನಿಯಲ್ಲಿ ಅಜೇಯರಾಗಿ ಉಳಿದುಕೊಂಡಿರುವ ಹಾಲಿ ಚಾಂಪಿಯನ್ ಭಾರತ (IND vs AUS) ಫೈನಲ್‌ಗೆ ಟಿಕೆಟ್ ಗಿಟ್ಟಿಸಿಕೊಂಡಿದೆ. ಆರನೇ ಬಾರಿಗೆ ವಿಶ್ವ ಚಾಂಪಿಯನ್ ಆಗುವತ್ತ ಟೀಂ ಇಂಡಿಯಾ ಕಣ್ಣಿಟ್ಟಿದೆ. ಉದಯ್ ಸಹರನ್ ನಾಯಕತ್ವದ ಭಾರತ ತಂಡದ ನೈತಿಕ ಸ್ಥೈರ್ಯ ಹೆಚ್ಚಿದ್ದು, ಫೈನಲ್‌ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡುವ ಹಂಬಲದಲ್ಲಿದೆ. ಭಾರತ ಸೆಮಿಫೈನಲ್‌ನಲ್ಲಿ ದಕ್ಷಿಣ ಆಫ್ರಿಕಾವನ್ನು 2 ವಿಕೆಟ್‌ಗಳಿಂದ ಸೋಲಿಸಿದರೆ, ಆಸ್ಟ್ರೇಲಿಯಾವು ಪಾಕಿಸ್ತಾನವನ್ನು 1 ವಿಕೆಟ್‌ನಿಂದ ಸೋಲಿಸಿ ಟೀಮ್ ಇಂಡಿಯಾದೊಂದಿಗೆ ಪ್ರಶಸ್ತಿ ಹಣಾಹಣಿಯಲ್ಲಿ ಸೆಣಸಾಡಲಿದೆ. ಏಕಾಂಗಿಯಾಗಿ ತಂಡವನ್ನು ವಿಶ್ವ ಚಾಂಪಿಯನ್ ಮಾಡುವ ಸಾಮರ್ಥ್ಯವನ್ನು ಹೊಂದಿರುವ ಅನೇಕ ಆಟಗಾರರು ಎರಡೂ ತಂಡಗಳಲ್ಲಿದ್ದಾರೆ. ಭಾನುವಾರ ಫೆಬ್ರವರಿ 11 ರಂದು ಮಧ್ಯಾಹ್ನ 1:30ಕ್ಕೆ ಫೈನಲ್ ಪಂದ್ಯ ಆರಂಭವಾಗಲಿದೆ