IAS ರೋಹಿಣಿ ಸಿಂಧೂರಿಗೆ ಸಂಕಷ್ಟ 

ಬೆಳಗಾಯಿತು ವಾರ್ತೆ| www.belagayithu.in
ಬೆಂಗಳೂರು, ಏಪ್ರಿಲ್ 03: ಸುಮಾರು 5 ವರ್ಷಗಳ ಹಿಂದೆ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ  ಪರಿಸರ ಸ್ನೇಹಿ ಬಟ್ಟೆ ಬ್ಯಾಗ್ ಖರೀದಿಯಲ್ಲಿ ಕೋಟ್ಯಂತರ ರೂಪಾಯಿ ಅಕ್ರಮ ಎಸಗಿದ ಆರೋಪಕ್ಕೆ ತುತ್ತಾಗಿದ್ದರು. ಈ ಪ್ರಕರಣವೀಗ ಮತ್ತೆ ಮುನ್ನೆಲೆಗೆ ಬಂದಿದ್ದು, ಕರ್ನಾಟಕ ಹೈಕೋರ್ಟ್ ​ಮಹತ್ವದ ಆದೇಶ ಹೊರಡಿಸಿದೆ. ದೂರುದಾರ ವಕೀಲ, ರವಿಚಂದ್ರೇಗೌಡ ಎನ್.ಆರ್ ಎನ್ನುವರು ಹೈಕೋರ್ಟ್​​​ಗೆ ರಿಟ್ ಅರ್ಜಿ ಸಲ್ಲಿಸಿದ್ದು, ಈ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ತನಿಖೆಗೆ ಅನುಮತಿ ನಿರಾಕರಿಸಿದ ಸರ್ಕಾರದ ಕ್ರಮ ರದ್ದುಪಡಿಸಿದೆ. ರೋಹಿಣಿ ಸಿಂಧೂರಿಗೆ ಸಂಕಷ್ಟ ತಂದಿಟ್ಟ ಬಟ್ಟೆ ಬ್ಯಾಗ್ ಖರೀದಿ ಅಕ್ರಮ ಆರೋಪದ ಹಿನ್ನೆಲೆ ಏನು ಎಂಬುದರ ಬಗ್ಗೆ ಮಾಹಿತಿ ಇಲ್ಲಿದೆ.
ಸರ್ಕಾರದ ಖಜಾನೆ ಖಾಲಿ ಮಾಡಿದ ಆರೋಪ
2021ರಲ್ಲಿ ಮೈಸೂರು ಜಿಲ್ಲಾಧಿಕಾರಿಯಾಗಿದ್ದಾಗ, ಪ್ಲಾಸ್ಟಿಕ್ ಮುಕ್ತ ಅಭಿಯಾನದ ಭಾಗವಾಗಿ ಮೈಸೂರು ಮಹಾನಗರ ಪಾಲಿಕೆ ಮತ್ತು ಇತರ ಸ್ಥಳೀಯ ಸಂಸ್ಥೆಗಳಿಗೆ ವಿತರಿಸಲು ಸುಮಾರು 14 ಕೋಟಿ 71 ಲಕ್ಷ ರೂ. ಮೌಲ್ಯದ ಬಟ್ಟೆ ಬ್ಯಾಗ್‌ಗಳನ್ನು ಖರೀದಿಸಲು ರೋಹಿಣಿ ಸಿಂಧೂರಿ ಅನುಮೋದನೆ ನೀಡಿದ್ದರು. ಮಾರುಕಟ್ಟೆಯಲ್ಲಿ ಒಂದು ಬ್ಯಾಗ್‌ನ ಬೆಲೆ ಸುಮಾರು 13 ರೂ. ಇದ್ದರೂ, ನಿಯಮಗಳನ್ನು ಮೀರಿ ಪ್ರತಿ ಬ್ಯಾಗ್‌ಗೆ 52 ರೂ.ನಂತೆ (ಜಿಎಸ್‌ಟಿ ಸೇರಿ) ಖರೀದಿಸಲಾಗಿದೆ ಎಂದು ಅವರ ಮೇಲೆ ಆರೋಪ ಮಾಡಲಾಗಿತ್ತು. ಈ ದುಬಾರಿ ಖರೀದಿಯಿಂದಾಗಿ ಸರ್ಕಾರದ ಖಜಾನೆಗೆ ಸುಮಾರು 5.88 ಕೋಟಿಯಿಂದ 7.65 ಕೋಟಿ ರೂ.ವರೆಗೆ ನಷ್ಟವಾಗಿದೆ ಎಂದು ಸಾಮಾಜಿಕ ಕಾರ್ಯಕರ್ತ ರವಿಚಂದ್ರ ಗೌಡ ದೂರು ದಾಖಲಿಸಿದ್ದರು.

Related Articles

Stay Connected

53,222FansLike
67,874FollowersFollow
12,303FollowersFollow
105,423SubscribersSubscribe
- Advertisement -spot_img

Latest Articles