ಕ್ರಸ್ಟ್ ಗೇಟ್‌ಗಳ ಅಳವಡಿಕೆ ಮೇ ಅಂತ್ಯದೊಳಗೆ ಪೂರ್ಣ

ಬೆಳಗಾಯಿತು ವಾರ್ತೆ | www.belagayithu.in
ಕೊಪ್ಪಳ : ರೈತರ ಜೀವನಾಡಿ ತುಂಗಭದ್ರಾ ಜಲಾಶಯದ ಎಲ್ಲಾ 33 ಕ್ರಸ್ಟ್ ಗೇಟ್‌ಗಳ ಅಳವಡಿಕೆ ಕಾರ್ಯವನ್ನು ಮೇ ಅಂತ್ಯದೊಳಗೆ ಪೂರ್ಣಗೊಳಿಸಿ, ರೈತರಿಗೆ ಅನುಕೂಲ ಮಾಡಿಕೊಡಲಾಗುವುದು ಎಂದು ಸಣ್ಣ ನೀರಾವರಿ, ವಿಜ್ಞಾನ ತಂತ್ರಜ್ಞಾನ ಸಚಿವರು ಹಾಗೂ ವಿಧಾನ ಪರಿಷತ್ ಸಭಾ ನಾಯಕರಾದ ಎನ್.ಎಸ್. ಭೋಸರಾಜು ತಿಳಿಸಿದರು.
ಅವರು ಶುಕ್ರವಾರ ಕೊಪ್ಪಳ ಜಿಲ್ಲೆಯ ಮುನಿರಾಬಾದ್ ತುಂಗಭದ್ರಾ ಜಲಾಶಯದ ಆಣೆಕಟ್ಟಿನ ನೂತನ ಕ್ರಸ್ಟ್‌ ಗೇಟ್‌ಗಳ ಅಳವಡಿಕೆ ಕಾಮಗಾರಿಯ ಪರಿವೀಕ್ಷಣೆ ಮಾಡಿದ ನಂತರ ಪತ್ರಕರ್ತರಿಗೆ ಮಾಹಿತಿ ನೀಡಿ ಮಾತನಾಡಿದರು.
ಈಗಾಗಲೇ ತುಂಗಭದ್ರಾ ಜಲಾಶಯದ 18 ನೂತನ ಕ್ರಸ್ಟ್ ಗೇಟ್‌ಗಳ ಅಳವಡಿಕೆ ಕಾರ್ಯ ಪೂರ್ಣಗೊಂಡಿದ್ದು, 5 ಕ್ರಸ್ಟ್ ಗೇಟ್‌ಗಳ ಅಳವಡಿಕೆ ಕಾರ್ಯ ಪ್ರಗತಿಯಲ್ಲಿದೆ. ಮಾರ್ಚ್ ಅಂತ್ಯದ ವೇಳೆಗೆ ಒಟ್ಟು 23 ಗೇಟ್‌ಗಳ ಕೆಲಸ ಮುಗಿಯುವ ನಿರೀಕ್ಷೆಯಿದೆ. ಎಕ್ಸ್ಪರ್ಟ್ ಟೀಮ್ ಮತ್ತು ಚೀಫ್ ಎಂಜಿನಿಯರ್‌ಗಳ ಪ್ರಕಾರ, ಗೇಟ್ ಬದಲಾವಣೆಯ ಸಮಯದಲ್ಲಿ ಹಳೆಯ ಅಣೆಕಟ್ಟಿನ ರಚನೆಗೆ ಯಾವುದೇ ತೊಂದರೆಯಾಗಿಲ್ಲ. ಏಪ್ರಿಲ್ ತಿಂಗಳಿನಲ್ಲಿ ಉಳಿದ 10 ಗೇಟ್‌ಗಳನ್ನು ಅಳವಡಿಸಿ, ಮೇ ಅಂತ್ಯದೊಳಗೆ ಎಲ್ಲಾ ಕ್ರಸ್ಟ್ ಗೇಟ್‌ಗಳ ಅಳವಡಿಕೆ ಕಾಮಗಾರಿ ಪೂರ್ಣಗೊಳ್ಳುವ ಭರವಸೆ ಇದೆ‌. ಕಾಮಗಾರಿಯು ನಿರೀಕ್ಷಿತ ಸಮಯಕ್ಕಿಂತ ವೇಗವಾಗಿ ಸಾಗುತ್ತಿದ್ದು, ಜೂನ್‌ನಲ್ಲಿ ಆರಂಭವಾಗುವ ಮುಂಗಾರು ಮಳೆಗಾಲದ ವೇಳೆಗೆ ಜಲಾಶಯವು ಸಂಪೂರ್ಣ ಸಿದ್ಧವಾಗಲಿದೆ ಎಂಬ ವಿಶ್ವಾಸವಿದೆ ಎಂದರು.

Related Articles

Stay Connected

53,222FansLike
67,874FollowersFollow
12,303FollowersFollow
105,423SubscribersSubscribe
- Advertisement -spot_img

Latest Articles