ಊಟ ತಿಂಡಿಯಲ್ಲೇ ಎರಡೂವರೆ ವರ್ಷ ಕಳೆದ್ರು

ಬೆಳಗಾಯಿತು ವಾರ್ತೆ | Www.belagayithu.in
ಚಿತ್ರದುರ್ಗ: ‘ಮುಖ್ಯಮಂತ್ರಿ ಉಪ ಮುಖ್ಯಮಂತ್ರಿಗಳು ಊಟ ತಿಂಡಿ ಮಾಡಿಕೊಂಡೇ ಎರಡೂವರೆ ವರ್ಷ ಕಳೆದಿದ್ದಾರೆ. ಸುಳ್ಳು ಹೇಳಿಕೊಂಡು ಬಂದ ಸರ್ಕಾರದಿಂದ ಜನರಿಗೆ ಅನ್ಯಾಯವಾಗಿದೆ. 2028ರ ವಿಧಾನಸಭಾ ಚುನಾವಣೆಯಲ್ಲಿ ಬಿಹಾರ ಚುನಾವಣೆಯ ಫಲಿತಾಂಶ ರಾಜ್ಯದಲ್ಲಿ ಬರಲಿದೆ. ಬಿಹಾರಕ್ಕಿಂತ ದೊಡ್ಡಮಟ್ಟದಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ’ ಎಂದು ಶ್ರೀರಾಮುಲು ಹೇಳಿದರು. 
ಸುದ್ದಿಗಾರರ ಜೊತೆ ಮಾತನಾಡಿದ ಅವರು ‘ಸಿದ್ದರಾಮಯ್ಯ ಅವರು ಡಿಕೆಶಿ ಮೇಲೆ ಡಿಕೆಶಿಯವರು ಸಿದ್ದರಾಮಯ್ಯ ಅವರ ಮೇಲೆ ಯಾವತ್ತು ಬಾಂಬ್‌ ಹಾಕುತ್ತಾರೋ ಗೊತ್ತಿಲ್ಲ. ಸದ್ಯಕ್ಕಂತೂ ಕದನ ವಿರಾಮ ಘೋಷಣೆಯಾಗಿದೆ. ಅಧಿಕಾರಕ್ಕಾಗಿ ಕಚ್ಚಾಡುತ್ತಿರುವ ಕಾಂಗ್ರೆಸ್‌ ನಾಯಕರು ರಾಜ್ಯವನ್ನು ಮರೆತಿದ್ದಾರೆ. ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್‌ ಠೇವಣಿ ಕಳೆದುಕೊಂಡಿದೆ’ ಎಂದರು. ‘ಬಿ.ವೈ. ವಿಜಯೇಂದ್ರ ಅವರು ಬಿಜೆಪಿಯ ಉಸ್ತುವಾರಿ ವಹಿಸಿಕೊಂಡ ನಂತರ ಕಾರ್ಯಕರ್ತರು ಚುರುಕಿನಿಂದ ಕೆಲಸ ಮಾಡುತ್ತಿದ್ದಾರೆ. ಮುಂದೆಯೂ ಅವರೇ ರಾಜ್ಯಘಟಕದ ಅಧ್ಯಕ್ಷರಾಗಿ ಮುಂದುವರಿಯಲಿದ್ದಾರೆ’ ಎಂದರು.

Related Articles

Stay Connected

53,222FansLike
67,874FollowersFollow
12,303FollowersFollow
105,423SubscribersSubscribe
- Advertisement -spot_img

Latest Articles