ಕಾರ್ಮಿಕರ ಸೇವೆಗೆ ಮೌಲ್ಯ ಕಟ್ಟಲು ಸಾಧ್ಯವಿಲ್ಲ: ಜೆಸ್ಕಾಂ ಎಇಇ


ಬೆಳಗಾಯಿತು ವಾರ್ತೆ| www.belagayithu.in
ಕುರುಗೋಡು: ತಾಲ್ಲೂಕಿನ ಕುರುಗೋಡಿನಲ್ಲಿ ಇರುವ ಗುಲಬರ್ಗಾ ವಿದ್ಯುತ್ ಸರಬರಾಜು ಕಂಪನಿ (ಜೆಸ್ಕಾಂ) ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರ ಕಚೇರಿಯಲ್ಲಿ ಅಂತರರಾಷ್ಟ್ರೀಯ ಕಾರ್ಮಿಕರ ದಿನಾಚರಣೆಯನ್ನು ಸರಳವಾಗಿ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಯಿತು.
ಈ ವೇಳೆ ಮಾತನಾಡಿದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಮಹಮ್ಮದ್ ಜಾಫರ್ ಅವರು, “ಕಾರ್ಮಿಕರ ಸೇವೆ ಅನನ್ಯವಾಗಿದ್ದು, ಅವರ ಪರಿಶ್ರಮಕ್ಕೆ ಮೌಲ್ಯ ಕಟ್ಟಲು ಸಾಧ್ಯವಿಲ್ಲ. ಅವರ ಶ್ರಮದ ಫಲವಾಗಿ ಜೆಸ್ಕಾಂ ಸಂಸ್ಥೆ ಗ್ರಾಹಕರಿಗೆ ಉತ್ತಮ ಸೇವೆ ನೀಡಲು ಸಾಧ್ಯವಾಗುತ್ತಿದೆ” ಎಂದು ಹೇಳಿದರು. ಜೊತೆಗೆ ಎಲ್ಲಾ ಕಾರ್ಮಿಕರಿಗೆ ಅಭಿನಂದನೆಗಳು ಮತ್ತು ಧನ್ಯವಾದಗಳನ್ನು ಅರ್ಪಿಸಿದರು.
ಈ ಕಾರ್ಯಕ್ರಮದಲ್ಲಿ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪವರ್‌ಮನ್‌ಗಳು, ಗ್ರಾಮ ವಿದ್ಯುತ್ ಪ್ರತಿನಿಧಿಗಳು ಹಾಗೂ ಸಿಬ್ಬಂದಿಯನ್ನು ಸನ್ಮಾನಿಸಿ, ಅವರಿಗೆ ಪರಿಕರಗಳನ್ನು ವಿತರಿಸಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಹಿರಿಯ ಸಹಾಯಕ ನಾಗರಾಜ್, ಶಾಖಾಧಿಕಾರಿ ಮಹಮ್ಮದ್ ಹನೀಪ್ ಹಾಗೂ ಇಲಾಖೆಯ ಎಲ್ಲಾ ನೌಕರರು ಭಾಗವಹಿಸಿದ್ದರು.

Related Articles

Stay Connected

53,222FansLike
67,874FollowersFollow
12,303FollowersFollow
105,423SubscribersSubscribe
- Advertisement -spot_img

Latest Articles