ಬೆಳಗಾಯಿತು ವಾರ್ತೆ |www.belagayithu.in
ಬಳ್ಳಾರಿ: ಭಾರತದಲ್ಲಿ ಮಹಿಳೆಯರ ಸ್ಥಾನಮಾನ, ಮೀಸಲಾತಿಗಳು ಅವೈಜ್ಞಾನಿಕತೆಯಿಂದ ಕೂಡಿವೆ ಎಂದು ಅಖಿಲ ಭಾರತೀಯ ಜನವಾದಿ ಮಹಿಳಾ ಸಂಘಟನೆಯ ಹೋರಾಟಗಾರ್ತಿ ಕೆ. ನೀಲಾ ಹೇಳಿದರು.
ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಡಾ. ಬಿ.ಆರ್. ಅಂಬೇಡ್ಕರ್ ಸಭಾಂಗಣದಲ್ಲಿ ಗುರುವಾರ ಸಸ್ಯಶಾಸ್ತ್ರ ಅಧ್ಯಯನ ವಿಭಾಗ ಹಾಗೂ ದೈಹಿಕ ಶಿಕ್ಷಣ ಮತ್ತು ಕ್ರೀಡಾ ವಿಭಾಗದ ಜಂಟಿ ಸಹಭಾಗಿತ್ವದಲ್ಲಿ ಆಯೋಜಿಸಿದ್ದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸುವ ಮುಖೇನ ಉದ್ಘಾಟಿಸಿ ಅವರು ಮಾತನಾಡಿದ
ಮಹಿಳೆಯರು ಎಲ್ಲ ಕ್ಷೇತ್ರಗಳಲ್ಲಿ ಗೌರವಾನ್ವಿತ ಬದುಕು ಕಟ್ಟಿಕೊಳ್ಳುವ ವೈಜ್ಞಾನಿಕ ತಳಹದಿಯ ಮಾದರಿಗಳನ್ನು ರೂಪಿಸುವ ಚಿಂತನೆ ದೇಶದಲ್ಲಿ ನಡೆಯಬೇಕಿದೆ. ಗ್ಲೋರಿಯಾ ಸ್ಟಿನೇಮ್ ಹೇಳಿದಂತೆ ಮಾನವ ಹಾಗೂ ಮಹಿಳಾ ಹಕ್ಕುಗಳ ಬಗ್ಗೆ ಕಾಳಜಿ ವಹಿಸುವುದು ಅತಿ ಮುಖ್ಯವಾಗಿದೆ. ಮಹಿಳೆಯರಿಗೆ ಸಮಾನತೆಗೆ ಪ್ರಾತಿನಿಧ್ಯತೆ ದೊರಕಿಸಲು ವಿಶ್ವವಿದ್ಯಾಲಯಗಳು ಪೂರಕವಾಗಿ ಕಾರ್ಯ ನಿರ್ವಹಿಸಬೇಕು ಎಂದು ಹೇಳಿದರು.
ಈ ಸಂಧರ್ಭದಲ್ಲಿ ಕುಲಪತಿಗಳಾದ ಪ್ರೊ. ಕೆ. ಎಂ. ಮೇತ್ರಿ, ಕುಲಸಚಿವರಾದ ಎಸ್. ಎನ್. ರುದ್ರೇಶ್, ಕುಲಸಚಿವರು (ಮೌಲ್ಯಮಾಪನ) ಪ್ರೊ. ರಮೇಶ್ ಓಲೇಕಾರ್, ಡಾ. ಉಮಾರೆಡ್ಡಿ, ಸಹಾಯಕ ಪ್ರಾಧ್ಯಾಪಕರಾದ ಸಿದ್ದೇಶ್ವರಿ, ಡಾ. ಕೃಷ್ಣವೇಣಿ, ಡಾ. ಕವಿತಾ ಸಾಗರ, ಡಾ. ಶಶಿಧರ್ ಕೆಲ್ಲೂರ್, ವಿವಿಧ ನಿಕಾಯಗಳ ಡೀನರು, ವಿವಿಧ ವಿಭಾಗಗಳ ಮುಖ್ಯಸ್ಥರು, ಸಂಯೋಜಕರು, ಸಂಶೋಧನಾ ವಿದ್ಯಾರ್ಥಿಗಳು, ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಹಾಜರಿದ್ದರು.