ಹರಪನಹಳ್ಳಿ: ಕೋವಿಡ್ ಲಸಿಕೆಯ ಬಗ್ಗೆ ಸಾರ್ವಜನಿಕರು ಆತಂಕ ಪಡುವ ಅವಶ್ಯಕತೆ ಇಲ್ಲ ಯಾವ ಊಹಾಪೆÇೀಹಗಳಿಗೆ ಕಿವಿ ಗೊಡದೆ 45 ವರ್ಷ ವಯೋ ಮಾನದವರು ಹಾಗೂ ರಕ್ತದೊತ್ತಡ, ಮಧುಮೇಹದಂತಹ ಖಾಯಿಲೆಯಿಂದ ಬಳಲುತ್ತಿರುವವರು ಕಡ್ಡಾಯವಾಗಿ ಸ್ವಯಂ ಪ್ರೇರಿತರಾಗಿ ಆಗಮಿಸಿ ಕೋವಿಡ್ ಲಸಿಕೆಯನ್ನು ಹಾಕಿಸಿಕೊಳ್ಳಿ ಎಂದು ಮನವಿ ಪುರಸಭೆ ಸದಸ್ಯ ಜಾಕೀರ್ ಹುಸೇನ್ ಸರ್ಖಾವಾಸ್ ಅವರು ಜನರಲ್ಲಿ ಮನವಿ ಮಾಡಿದರು.ಪಟ್ಟಣದ 11ನೇ ವಾರ್ಡ್ ಮೇನ್ ಶಾಲೆಯಲ್ಲಿ ತೆರೆದ ಕೋವಿಡ್ ಲಸಿಕಾ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸಿದ ಬಳಿಕ ಮಾತನಾಡಿದ ಅವರು ರಾಜ್ಯದಲ್ಲಿ ಕರೋನಾ ಎರಡನೇ ಅಲೇ ಪ್ರಾರಂಭವಾಗಿರುವ ಹಿನ್ನೆಲೆ ಜಿಲ್ಲೆಯಲ್ಲಿಯೂ ಸಹ ಮತ್ತೆ ಸೋಂಕು ಉಲ್ಬಣಗೊಳ್ಳುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ ಹಾಗಾಗಿ ಜನರು ಸ್ವಯಂ ಪ್ರೇರಿತರಾಗಿ ಕಡ್ಡಾಯವಾಗಿ ಮಾಸ್ಕ್ ಧರಸಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಮೂಲಕ ಕರೋನಾ ನಿಯಂತ್ರಿಸಲು ಮುಂದಾಗಬೇಕು ಎಂದು ಕರೆ ನೀಡಿದರು.