38.9 C
Bellary
Sunday, April 28, 2024

Localpin

spot_img

ಹೃದಯಾಘಾತದಿಂದ ಹಿರಿಯ ನಟ ನಿಧನ

ಬೆಳಗಾಯಿತು ವಾರ್ತೆ | www.belagayithu.in
ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ಹಾಗೂ ನಿರ್ಮಾಪಕ ದ್ವಾರಕೀಶ್ (81) ಅವರು ಮಂಗಳವಾರ ವಿಧಿವಶರಾಗಿದ್ದಾರೆ. ಅವರ ಸಾವು ಚಿತ್ರರಂಗಕ್ಕೆ ತುಂಬಲಾರದ ನಷ್ಟವನ್ನುಂಟು ಮಾಡಿದೆ. ಕನ್ನಡದಲ್ಲಿ ಹಲವು ಸೂಪರ್ ಹಿಟ್ ಚಿತ್ರಗಳನ್ನು ನೀಡಿದ ಅವರು ಇನ್ನಿಲ್ಲ ಎಂಬ ಸುದ್ದಿ ಸಾಕಷ್ಟು ನೋವುಂಟು ಮಾಡಿದೆ. ಹಲವು ದಿಗ್ಗಜರ ಜೊತೆ ಅವರು ನಟಿಸಿ ಫೇಮಸ್ ಆಗಿದ್ದರು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ದ್ವಾರಕೀಶ್ ಅವರು ಹೃದಯಾಘಾತದಿಂದ ಇಂದು ಇಹಲೋಕ ತ್ಯಜಿಸಿದ್ದಾರೆಂದು ಮೂಲಗಳು ತಿಳಿಸಿವೆ.
ದ್ವಾರಕೀಶ್ ಅವರ ನಿಧನವಾರ್ತೆ ತಿಳಿಯುತ್ತಿದ್ದಂತೆ ಕನ್ನಡ ಚಿತ್ರರಂಗದ ಸೆಲೆಬ್ರಿಟಿಗಳು ಹಾಗೂ ಅವರ ಅಭಿಮಾನಿಗಳು ಸಂತಾಪ ಸೂಚಿಸುತ್ತಿದ್ದಾರೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಫ್ಯಾನ್ಸ್ ಕೋರುತ್ತಿದ್ದಾರೆ. ಅವರು ಮೃತಪಟ್ಟ ಬಗ್ಗೆ ಈ ಮೊದಲು ಹಲವು ಬಾರಿ ವದಂತಿ ಹಬ್ಬಿತ್ತು. ಈ ಬಾರಿಯೂ ಸಾವಿನ ಸುದ್ದಿ ಫೇಕ್ ಇರಬಹುದು ಎಂದು ಎಲ್ಲರೂ ಭಾವಿಸಿದ್ದರು. ಈಗ ಅವರ ಕುಟುಂಬದ ಕಡೆಯಿಂದಲೇ ಇದಕ್ಕೆ ಸ್ಪಷ್ಟನೆ ನೀಡಲಾಗಿದೆ.

Related Articles

Stay Connected

53,222FansLike
67,874FollowersFollow
12,303FollowersFollow
105,423SubscribersSubscribe
- Advertisement -spot_img

Latest Articles