23.5 C
Bellary
Sunday, February 2, 2025

Localpin

spot_img

ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ನಿಧನ

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ಅವರು ವಯೋಸಹಜ ಅನಾರೋಗ್ಯದಿಂದ ನಿಧನರಾಗಿದ್ದಾರೆ.
85 ವರ್ಷದ ನಟಿ ನೆಲಮಂಗಲದ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದು, ಪುತ್ರ ವಿನೋದ್ ರಾಜ್ ಅವರನ್ನು ಲೀಲಾವತಿ ಅಗಲಿದ್ದಾರೆ.

1938ರಲ್ಲಿ ದಕ್ಷಿಣ ಕನ್ನಡದ ಬೆಳ್ತಂಗಡಿಯಲ್ಲಿ ಜನಿಸಿದ್ದ ಲೀಲಾವತಿ ಅವರು 50 ವರ್ಷಗಳ ಕಾಲ ಚಿತ್ರರಂಗದಲ್ಲಿ ಸೇವೆ ಸಲ್ಲಿಸಿದ್ದರು. ಕನ್ನಡ ದಿಗ್ಗಜ ನಟರಾಟ ರಾಜ್‌ಕುಮಾರ್, ವಿಷ್ಣುವರ್ಧನ್ ಮುಂತಾದವರ ಜೊತೆ ಅಭಿನಯಿಸಿ ಅವರು ಸೈ ಎನಿಸಿಕೊಂಡಿದ್ದರು. ಕನ್ನಡ, ತಮಿಳು, ತೆಲುಗು ಸೇರಿದಂತೆ 600ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿದ್ದಾರೆ.
1953ರಲ್ಲಿ ಬಿಡುಗಡೆಯಾಗಿದ್ದ ‘ಚಂಚಲ ಕುಮಾರಿ’ ಚಿತ್ರದ ಮೂಲಕ ಲೀಲಾವತಿ ಅವರು ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದರು. ನಂತರ ಕನ್ನಡ, ತೆಲುಗು, ಮಲಯಾಳಂ, ತುಳು ಮುಂತಾದ ಭಾಷೆಗಳಲ್ಲಿ ನಟಿಸಿ ಲೀಲಾವತಿ ಸೈ ಎನಿಸಿಕೊಂಡರು. ‘ಮದುವೆ ಮಾಡಿನೋಡು’ ಮತ್ತು ‘ಸಂತ ತುಕಾರಾಮ್’ ಸಿನಿಮಾಗಳಿಗೆ ಲೀಲಾವತಿ ಅವರು 2 ರಾಷ್ಟ್ರ ಪ್ರಶಸ್ತಿ ಪಡೆದಿದ್ದರು.
ಲೀಲಾವತಿ ಅವರು ತುಂಬಿದ ಕೊಡ, ಮಹಾತ್ಯಾಗ, ಭಕ್ತ ಕುಂಬಾರ, ಸಿಪಾಯಿ ರಾಮು, ಗೆಜ್ಜೆ ಪೂಜೆ ಚಿತ್ರಗಳಲ್ಲಿನ ಮನೋಜ್ಞ ಅಭಿನಯಕ್ಕೆ ರಾಜ್ಯ ಪ್ರಶಸ್ತಿ ಪಡೆದಿದ್ದು ಕನ್ನಡದ ಕಂದ ಚಿತ್ರಕ್ಕೆ ಫಿಲ್ಮ್ ಫೇರ್ ಪ್ರಶಸ್ತಿ ಕೂಡ ಸಿಕ್ಕಿತ್ತು. ಜೀವಮಾನ ಸಾಧನೆಗಾಗಿ 1999ರಲ್ಲಿ ಲೀಲಾವತಿ ಅವರು ಡಾ. ರಾಜ್‌ಕುಮಾರ್ ಪ್ರಶಸ್ತಿ ಪಡೆದರು. 2008ರಲ್ಲಿ ತುಮಕೂರು ವಿಶ್ವವಿದ್ಯಾಲಯದಿಂದ ಅವರಿಗೆ ಗೌರವ ಡಾಕ್ಟರೇಟ್ ನೀಡಲಾಗಿತ್ತು.
ಲೀಲಾವತಿ ನಿಧನಕ್ಕೆ ಚಿತ್ರರಂಗದ ಗಣ್ಯರು, ಅಭಿಮಾನಿಗಳು, ರಾಜಕೀಯ ಗಣ್ಯರು ಕಂಬನಿ ಮಿಡಿದಿದ್ದಾರೆ.

Related Articles

Stay Connected

53,222FansLike
67,874FollowersFollow
12,303FollowersFollow
105,423SubscribersSubscribe
- Advertisement -spot_img

Latest Articles