ಬೆಳಗಾಯಿತು ವಾರ್ತೆ
ಬಳ್ಳಾರಿ: ಸಾಮಾಜಿಕ, ಐತಿಹಾಸಿಕ ಮತ್ತು ಪೌರಾಣಿಕ ನಾಟಕಗಳಲ್ಲಿ ಮನೋಜ್ಞವಾಗಿ ಅಭಿನಯಿಸುವ ಮೂಲಕ ರಂಗಭೂಮಿ ಕ್ಷೇತ್ರಕ್ಕೆ ಮಹತ್ವದ ಕೊಡುಗೆಯನ್ನು ನೀಡಿದ ಹಿರಿಯ ರಂಗಭೂಮಿ ಕಲಾವಿದ ರಮೇಶ್ ಗೌಡ ಪಾಟೀಲ್ ಅವರು ಶುಕ್ರವಾರ ಬೆಳಗ್ಗೆ ರಂಗಭೂಮಿಯನ್ನು ತೆಜೇಸಿದರು.
ಹಂಪಿ ಉತ್ಸವದ ಧ್ವನಿ ಬೆಳಕು ಕಾರ್ಯಕ್ರಮದಲ್ಲಿ ಶ್ರೀ ಕೃಷ್ಣದೇವರಾಯ ಪಾತ್ರ, ಜಗಜ್ಯೋತಿ ಬಸವೇಶ್ವರ ನಾಟಕದಲ್ಲಿ ಬಸವಣ್ಣನವರ ಪಾತ್ರ ಹಾಗೂ ವಿವಿಧ ಪೌರಾಣಿಕ ನಾಟಕಗಳಲ್ಲಿ ಮಹತ್ವದ ಪಾತ್ರಗಳಲ್ಲಿ ಇವರು ನಟಿಸಿದ್ದಾರೆ.
ಅವರ ರಂಗಭೂಮಿ ಸೇವೆಯನ್ನು ಗುರುತಿಸಿ ಕರ್ನಾಟಕ ಸರ್ಕಾರ ನಾಟಕ ಅಕಾಡೆಮಿ ಸದಸ್ಯರನ್ನಾಗಿ ನೇಮಕ ಮಾಡಿತ್ತು. ಮತ್ತು ಅವರ ಸುದೀರ್ಘ ರಂಗಭೂಮಿ ಸೇವೆಯನ್ನು ಪರಿಗಣಿಸಿ ನಾಟಕ ಅಕಾಡೆಮಿ ಪ್ರಶಸ್ತಿ, ಮತ್ತು ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ಅನೇಕ ಸಂಘ ಸಂಸ್ಥೆಗಳು ಗೌರವ ಪ್ರಶಸ್ತಿ ನೀಡಿ ಗೌರವಿಸಿವೆ.
ಜೊತೆಗೆ ಇವರು ರಾಘವ ಮೆಮೋರಿಯಲ್ ಅಸೋಸಿಯೇಷನ್ ಕಾರ್ಯದರ್ಶಿಯಾಗಿ, ಚೇಂಬರ್ ಆಫ್ ಉಪಾಧ್ಯಕ್ಷರಾಗಿ, ವೀರಶೈವ ವಿದ್ಯಾವರ್ಧಕ ಸಂಘದ ಕಾರ್ಯಕಾರಿ ಸಮಿತಿ ಸದಸ್ಯರಾಗಿ, ಹೀರದ ಸೂಗಮ್ಮ ಪ್ರೌಢ ಶಾಲಾ ಆಡಳಿತ ಮಂಡಳಿ ಅಧ್ಯಕ್ಷರಾಗಿ, ವಿವಿಧ ಸಾಮಾಜಿಕ, ಶೈಕ್ಷಣಿಕ ಸಂಸ್ಥೆಗಳಲ್ಲಿ ಸಕ್ರಿಯವಾಗಿ ಸೇವೆ ಸಲ್ಲಿಸಿದ್ದಾರೆ.
ಇವರ ಅಗಲಿಕೆಯಿಂದ ರಂಗಭೂಮಿ ಕಲಾವಿದರಿಗೆ ತುಂಬಲಾರದ ನಷ್ಟವಾಗಿದೆ.
ಮಹಾನಗರ ಪಾಲಿಕೆ ಮೇಯರ್ ಪಿ. ಗಾದಪ್ಪ ಅವರು ಅವರ ಆತ್ಮಕ್ಕೆ ಭಗವಂತನು ಚಿರಶಾಂತಿಯನ್ನು ಕರುಣಿಸಲಿ ಎಂದು ಪ್ರಾರ್ಥಿಸಿದರು.
ಹಾಗೂ ನಗರ ಶಾಸಕ ಸೇರಿದಂತೆ ಹಲವಾರು ಗಣ್ಯರು ಸಂತಾಪ ಸೂಚಿಸಿದರು.





