ಬೆಂಗಳೂರು– ಚಂದನವನದ ಹಿರಿಯ ತಾರೆ, ಅಭಿನಯ ಶಾರದೆ ಜಯಂತಿ ವಿಧಿವಶರಾಗಿದ್ದಾರೆ. ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಅವರಿಗೆ 76 ವರ್ಷ ವಯಸ್ಸಾಗಿತ್ತು.
ಬಳ್ಳಾರಿ ಜಿಲ್ಲೆಯಲ್ಲಿ 1945, ಜನವರಿ 6ರಂದು ಜನಿಸಿದ ಜಯಂತಿ ಅವರ ಮೂಲ ಹೆಸರು ಕಮಲಾ ಕುಮಾರಿ. 60ರಿಂದ 80ರ ದಶಕಗಳವರೆಗೆ ಸ್ಯಾಂಡಲ್ವುಡ್ನಲ್ಲಿ ನಾಯಕನಟಿಯಾಗಿ ಜನರನ್ನ ಪುಳಕಿತಗೊಳಿಸಿದ್ದ ಜಯಂತಿ ಅವರು ಕನ್ನಡ ಮಾತ್ರವಲ್ಲದೆ ಇನ್ನೂ ಐದು ಭಾಷೆಗಳ ಸಿನಿಮಾಗಳಲ್ಲಿ ಅಭಿನಯಿಸಿ ರಂಜಿಸಿದ್ದಾರೆ. ಕನ್ನಡ, ತೆಲುಗು, ತಮಿಳು, ಮಲಯಾಳಂ, ಹಿಂದಿ ಮತ್ತು ಮರಾಠಿ ಭಾಷೆಗಳಲ್ಲಿ 500ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ.
ಹಲವು ಬಾರಿ ಅತ್ಯುತ್ತಮ ನಟನೆಗೆ ಪ್ರಶಸ್ತಿ ಪುರಸ್ಕಾರಗಳನ್ನ ಪಡೆದಿದ್ದಾರೆ. ಕನ್ನಡ ಚಿತ್ರರಂಗದ ಬೋಲ್ಡ್ ಅಂಡ್ ಬ್ಯೂಟಿಫುಲ್ಎಂದು ಖ್ಯಾತರಾಗಿದ್ದ ಅವರಿಗೆ ಅಭಿನಯ ಶಾರದೆ ಬಿರುದು ಕೂಡ ಚಿತ್ರರಂದವರು ನೀಡಿದ್ದರು.