ಬೆಳಗಾಯಿತು ವಾರ್ತೆ
ಹೊಸಪೇಟೆ(ವಿಜಯನಗರ): ಹಂಪಿಯಲ್ಲಿ ಇದೇ ಜೂ.21ರಂದು ಅಂತಾರಾಷ್ಟ್ರೀಯ ಯೋಗ ದಿನಾಚರಣೆ ವಿಜೃಂಭಣೆಯಿಂದ ಆಚರಿಸಲಾಗುತ್ತಿರುವ ಹಿನ್ನೆಲೆ ಜಿಲ್ಲಾಡಳಿತ ಇದುವರೆಗೆ ಕೈಗೊಂಡಿರುವ ಸಿದ್ಧತೆಗಳನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ಶಶಿಕಲಾ ಜೊಲ್ಲೆ ಅವರು ಗುರುವಾರ ಸಂಜೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ವಿರೂಪಾಕ್ಷ ದೇವಸ್ಥಾನದ ಮುಂಭಾಗ, ಎದುರು ಬಸವಣ್ಣ ಮಂಟಪದ ಬಳಿಯ ಸಿದ್ಧತೆಗಳನ್ನು ಪರಿಶೀಲಿಸಿದ ಸಚಿವರು ಅಗತ್ಯ ಸಲಹೆ-ಸೂಚನೆಗಳನ್ನು ಇದೇ ಸಂದರ್ಭದಲ್ಲಿ ನೀಡಿದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳಾದ ಅನಿರುದ್ದ ಶ್ರವಣ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್,ಜಿಪಂ ಸಿಇಒ ಭೋಯರ್ ಹರ್ಷಲ್ ನಾರಾಯಣರಾವ್, ಎಡಿಸಿ ಮಹೇಶಬಾಬು ಸೇರಿದಂತೆ ಜಿಲ್ಲೆಯ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಇದ್ದರು.