ಬೆಳಗಾಯಿತು ವಾರ್ತೆ | www.belagayithu.in
ಬೆಂಗಳೂರು: ಯೋಗೀಶಗೌಡ ಗೌಡರ ಕೊಲೆ ಪ್ರಕರಣದಲ್ಲಿ ಪ್ರಕರಣದ ಅಪರಾಧಿ, 15ನೇ ಆರೋಪಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅವರಿಗೆ ಜೀವಾವಧಿ ಶಿಕ್ಷೆಯನ್ನು ವಿಧಿಸಲಾಗಿದೆ.
ಜನಪ್ರತಿನಿಧಿಗಳ ನ್ಯಾಯಾಲಯದ ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ಅವರು ಶಿಕ್ಷೆ ವಿಧಿಸಿ ತೀರ್ಪು ಪ್ರಕಟಿಸಿದರು.
ಪ್ರಕಣದಲ್ಲಿನ 19 ಅಪರಾಧಿಗಳ ಪೈಕಿ 16 ಅಪರಾಧಿಗಳೆಲ್ಲರಿಗೂ ಜೀವಾವಧಿ ಶಿಕ್ಷೆಯನ್ನು ನೀಡಿ ಆದೇಶಿಸಲಾಗಿದೆ.
2016 ರಲ್ಲಿ ಧಾರವಾಡದಲ್ಲಿ ಜಿಲ್ಲಾ ಪಂಚಾಯಿತಿಯ ಬಿಜೆಪಿ ಸದಸ್ಯರಾಗಿದ್ದ ಯೋಗೀಶಗೌಡ ಗೌಡರ್ ಕೊಲೆ ನಡೆದಿತ್ತು. 2019ರಲ್ಲಿ ಈ ಪ್ರಕರಣದ ತನಿಖೆಯನ್ನು ಸಿಬಿಐ ಕೈಗೆತ್ತಿಕ್ಕೊಂಡಿತ್ತು.





