ಬೆಳಗಾಯಿತು ವಾರ್ತೆ |www.bealagayithu.in
ಬೆಂಗಳೂರು: ಮುಡಾ ಹಗರಣದ ಆರೋಪದ ಮೇಲೆ ಸಿಎಂ ಸಿದ್ದರಾಮಯ್ಯ ಅವರನ್ನು ಗುರಿಯಾಗಿಸಿಕೊಂಡು ಬಿಜೆಪಿಯು ಬೆಂಗಳೂರಿನಿಂದ ಮೈಸೂರಿಗೆ ಪಾದಯಾತ್ರೆ ನಡೆಸುತ್ತಿದೆ. ಇದರ ಬೆನ್ನಲ್ಲೇ ಈ ಬಾರಿ ಉತ್ತರ ಕರ್ನಾಟಕದಲ್ಲಿ ಮತ್ತೊಂದು ಬೃಹತ್ ಸಮಾವೇಶ ನಡೆಸುವ ಸಾಧ್ಯತೆಯಿದೆ.
ಮಹರ್ಷಿ ವಾಲ್ಮೀಕಿ ಎಸ್‌ಟಿ ಅಭಿವೃದ್ಧಿ ನಿಗಮ ಅಕ್ರಮಗಳನ್ನು ಎತ್ತಿ ತೋರಿಸುವ ನಿಟ್ಟಿನಲ್ಲಿ ಮುಂದಿನ ಕೆಲವು ವಾರಗಳಲ್ಲಿ ಬಳ್ಳಾರಿಯಲ್ಲಿ ಈ ರ್‍ಯಾಲಿ ನಡೆಯುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. ಬಳ್ಳಾರಿ ಭಾಗದಲ್ಲಿ ಮತ್ತೊಮ್ಮೆ ಪಾದಯಾತ್ರೆ ನಡೆಸಲು ಬಿಜೆಪಿ ಉತ್ಸುಕವಾಗಿದೆ ಎಂದು ಬಿ.ಶ್ರೀರಾಮುಲು ಹೇಳಿದ್ದಾರೆ.
ರಾಜ್ಯ ಸರ್ಕಾರವು ಎಸ್‌ಸಿ/ಎಸ್‌ಟಿಗಳಿಗೆ ಮೀಸಲಾದ 25,000 ಕೋಟಿ ರೂ.ಗಳನ್ನು ದುರುಪಯೋಗಪಡಿಸಿಕೊಂಡಿದೆ. ನ್ಯಾಯಕ್ಕಾಗಿ ನಾವು ಈ ವಿಷಯವನ್ನು ಪ್ರಸ್ತಾಪಿಸುತ್ತೇವೆ ಎಂದು ಶ್ರೀರಾಮುಲು ತಿಳಿಸಿದ್ದಾರೆ.





