ತುಂಗಭದ್ರಾ ಯೋಜನೆ ಮತ್ತು ವಿಜಯನಗರ ಕಾಲುವೆಗಳಿಗೆ ನೀರು

ಬೆಳಗಾಯಿತು ವಾರ್ತೆ |www.bealagayithu.in
ಬಳ್ಳಾರಿ: ಪ್ರಸ್ತಕ ಸಾಲಿನಲ್ಲಿ ಮುಂಗಾರು-ಹಂಗಾಮಿನಲ್ಲಿ ಮಳೆ ತೀವ್ರತೆ ಹೆಚ್ಚು ಇರುವುದರಿಂದ ಜಲಾನಯನ ಪ್ರದೇಶದಲ್ಲಿ ಸಾಕಷ್ಟು ಒಳಹರಿವು ಪ್ರಾರಂಭವಾಗಿದೆ. ಪ್ರಸ್ತುತ ತುಂಗಭದ್ರಾ ಜಲಾಶಯದಲ್ಲಿ ಸುಮಾರು 46.80 ಟಿ.ಎಂ.ಸಿ ನೀರು ಸಂಗ್ರಹಣೆಯಾಗಿದ್ದು, ಒಳಹರಿವು ಸುಮಾರು 1 ಲಕ್ಷ ಕ್ಯೂಸೆಕ್ಸ್ ನೀರು ಹರಿದು ಬರುತ್ತಿದೆ. ಪ್ರಯುಕ್ತ ತುಂಗಭದ್ರಾ ಅಚ್ಚುಕಟ್ಟು ಪ್ರದೇಶದ ಜನಪ್ರತಿನಿಧಿಗಳು ಹಾಗೂ ರೈತ ಮುಖಂಡರುಗಳೊಡನೆ ಚರ್ಚಿಸಿ, ತುಂಗಭದ್ರಾ ಯೋಜನೆಯ ಮತ್ತು ವಿಜಯನಗರ  ಕಾಲುವೆಗಳಿಗೆ ನೀರು ಹರಿಸುವಂತೆ ನೀರಾವರಿ ಸಲಹಾ ಸಮಿತಿಯ ಅಧ್ಯಕ್ಷ ಶಿವರಾಜ ಎಸ್. ತಂಗಡಗಿ ಅವರು ಸೂಚನೆ ನೀಡಿದ್ದಾರೆ.
ತುಂಗಭದ್ರಾ ಯೋಜನೆ ಮತ್ತು ವಿಜಯನಗರ ಕಾಲುವೆಗಳಿಗೆ ಮುಂಗಾರು ಹಂಗಾಮಿಗೆ ವೇಳಾ ಪಟ್ಟಿಯಂತೆ ಕಾಲುವೆವಾರು ನೀರು ಹರಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಕನೀನಿನಿ, ಮುನಿರಾಬಾದ್ ತುಂಗಭದ್ರಾ ಯೋಜನಾ ವೃತ್ತದ ಅಧೀಕ್ಷಕ ಅಭಿಯಂತರರು ಹಾಗೂ ತುಂಗಭದ್ರಾ ಯೋಜನೆ ಮತ್ತು ವಿಜಯನಗರ ಕಾಲುವೆಗಳ ನೀರಾವರಿ ಸಲಹಾ ಸಮಿತಿ ಸದಸ್ಯ ಕಾರ್ಯದರ್ಶಿಗಳಾದ ಎಲ್.ಬಸವರಾಜ್ ಅವರು ತಿಳಿಸಿದ್ದಾರೆ.

Related Articles

Stay Connected

53,222FansLike
67,874FollowersFollow
12,303FollowersFollow
105,423SubscribersSubscribe
- Advertisement -spot_img

Latest Articles