ಬೆಳಗಾಯಿತು ವಾರ್ತೆ |www.belagayithu.in
ಬಳ್ಳಾರಿ: ಎಲ್ಲಾ ಪಕ್ಷಗಳಲ್ಲಿ ಭಿನ್ನಾಭಿಪ್ರಾಯಗಳು ಇರುವಂತೆ ಕಾಂಗ್ರೆಸ್ ಪಕ್ಷದಲ್ಲಿ ಭಿನ್ನಾಭಿಪ್ರಾಯ ಇದ್ದರು ಚುನಾವಣೆ ಸಂದರ್ಭದಲ್ಲಿ ಎಲ್ಲಾರು ಒಟ್ಟಾಗಿ ಸೇರಿ ಸಾಮೂಹಿಕ ನಾಯಕತ್ವದಲ್ಲಿ ಚುನಾವಣೆ ಎದುರಿಸುತ್ತೇವೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಇ. ತುಕಾರಾಂ ಅವರನ್ನು ಗೆಲ್ಲಿಸಿ ದೆಹಲಿಗೆ ಕಳುಹಿಸುತ್ತೇವೆ ಎಂದರು.
ಸರ್ಕಾರದ ಐದು ಗ್ಯಾರಂಟಿ ಯೋಜನೆಗಳು ಪ್ರತಿ ಮನೆ ಮನೆಗೂ ತಲುಪಿವೆ. ಗ್ಯಾರಂಟಿಗಳು ಕಾಂಗ್ರೆಸ್ ಪಕ್ಷದ ಶ್ರೀ ರಕ್ಷೆ ಆಗಿದ್ದು ಈ ಬಾರಿ ಬಳ್ಳಾರಿ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ತುಕಾರಾಂ ಅವರು ಗೆಲ್ಲುವ ವಿಶ್ವಾಸವಿದೆ ಎಂದು ಸಚಿವ ನಾಗೇಂದ್ರ ಅವರು ಹೇಳಿದರು.
ನಗರದ ನಕ್ಷತ್ರ ಹೋಟೆಲ್ ನಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು 2008ರ ಮರು ವಿಂಗಡಣೆ ನಂತರ ಬಳ್ಳಾರಿ ಲೋಕಸಭಾ ಕ್ಷೇತ್ರದಲ್ಲಿ ಬಳ್ಳಾರಿ ಲೋಕಸಭಾ ಕ್ಷೇತ್ರದಲ್ಲಿ ಗೆದ್ದಿಲ್ಲ ಆದರೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಜಿಲ್ಲೆಯ ಐದು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದ್ದು, ಸರ್ಕಾರದ ಐದು ಗ್ಯಾರಂಟಿ ಯೋಜನೆಗಳು ಪ್ರತಿ ಮನೆ ಮನೆಗೂ ತಲುಪಿವೆ. ಗ್ಯಾರಂಟಿಗಳು ಕಾಂಗ್ರೆಸ್ ಪಕ್ಷದ ಶ್ರೀ ರಕ್ಷೆ ಆಗಿದ್ದು ಈ ಬಾರಿ ಬಳ್ಳಾರಿ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ತುಕಾರಾಂ ಅವರು ಗೆಲ್ಲುವ ವಿಶ್ವಾಸವಿದೆ ಎಂದರು.
ಈ ಸಂದರ್ಭದಲ್ಲಿ ಮೇಯರ್ ಶ್ವೇತಾ ಸೋಮು, ಮುಖಂಡರಾದ ಮುಂಡ್ರಗಿ ನಾಗರಾಜ್, ಅಂಜನೇಯಲು, ಮೊಹಮ್ಮದ್ ರಫೀಕ್ ಸೇರಿದಂತೆ ಮತ್ತಿತರರು ಇದ್ದರು.