37.1 C
Bellary
Thursday, April 11, 2024

Localpin

spot_img

ಅಮಿತ್‌ ಶಾ ಭೇಟಿ ಹಿಂದಿನ ರಹಸ್ಯವೇನು

ಬೆಳಗಾಯಿತು ವಾರ್ತೆ |www.belagayithu.in
ನವದೆಹಲಿ: ಲೋಕಸಭಾ ಚುನಾವಣೆಗೆ ರಾಜಕೀಯ ಪಕ್ಷಗಳ ತಯಾರಿ ಜೋರಾಗಿ ನಡೆಯುತ್ತಿದೆ. ಈಗಾಗಲೇ ಕರ್ನಾಟಕ ಬಿಜೆಪಿಯ 20 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಪ್ರಕಟ ಮಾಡಲಾಗಿದೆ. ಬಿಜೆಪಿ ಪಾಲಿಗೆ ಕರ್ನಾಟಕವು ಭದ್ರಕೋಟೆಯಾಗಿದ್ದು, ಸಂಪೂರ್ಣ ಹಿಡಿತ ಸಾಧಿಸಲು ಕಾರ್ಯತಂತ್ರವನ್ನು ರೂಪಿಸಲಾಗುತ್ತಿದೆ. ಇದರ ಭಾಗವಾಗಿ ಚುನಾವಣಾ ಚಾಣಕ್ಯ ಎಂದೇ ಹೆಸರಾಗಿರುವ ಅಮಿತ್‌ ಶಾ ಅವರು ಕೆಲವೊಂದು ವ್ಯೂಹಗಳನ್ನು ರಚನೆ ಮಾಡುತ್ತಿದ್ದಾರೆ. ಈ ಬೆಳವಣಿಗೆಗಳ ಮಧ್ಯೆ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರು ಶಾ ಅವರನ್ನು ಭೇಟಿ ಮಾಡಿರುವುದು ಕುತೂಹಲಕ್ಕೆ ಕಾರಣವಾಗಿದೆ. ಹೀಗಾಗಿ ಈ ಚುನಾವಣೆಯಲ್ಲಿ ಅವರು ಬಿಜೆಪಿಯನ್ನು ಬೆಂಬಲಿಸಲಿದ್ದಾರಾ? ಎಂಬ ಪ್ರಶ್ನೆ ಮೂಡಿದೆ.
ನವದೆಹಲಿಗೆ ತೆರಳಿದ್ದ ಗಾಲಿ ಜನಾರ್ದನ ರೆಡ್ಡಿ ಅವರು ಅಮಿತ್‌ ಶಾ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. ಈ ಸಂಬಂಧ ಅವರು ತಮ್ಮ ಸೋಷಿಯಲ್‌ ಮೀಡಿಯಾ ಎಕ್ಸ್‌ನಲ್ಲಿ ಫೋಟೊ ಸಹಿತ ಪೋಸ್ಟ್‌ವೊಂದನ್ನು ಹಂಚಿಕೊಂಡಿದ್ದಾರೆ.

Related Articles

Stay Connected

53,222FansLike
67,874FollowersFollow
12,303FollowersFollow
105,423SubscribersSubscribe
- Advertisement -spot_img

Latest Articles