ಮುಂಬೈ, ಅ 26(ಯುಎನ್ಐ) ಬಾಲಿವುಡ್ ನಟ ಶಾರುಖ್ ಖಾನ್ ಪುತ್ರನ ಹಣೆಬರಹ ಇಂದು ನಿರ್ಧಾರವಾಗಲಿದೆ. ಬಾಂಬೆ ಹೈಕೋರ್ಟ್ ನಲ್ಲಿ ಆರ್ಯನ್ ಖಾನ್ ಜಾಮೀನು ಅರ್ಜಿ ಕುರಿತು ವಿಚಾರಣೆ ಇವತ್ತು ನಡೆಯಲಿದೆ.
ಹೈಪ್ರೊಫೈಲ್ ಕೇಸ್ ಆಗಿರುವ ಕ್ರೂಸ್ ಡ್ರಗ್ ಪ್ರಕರಣದಲ್ಲಿ ಬಂಧಿಯಾಗಿರುವ ಆರ್ಯನ್ ಖಾನ್ ಅರ್ತರ್ ರೋಡ್ ಜೈಲಿನಲ್ಲಿ ಕಂಬಿ ಎಣಿಸುತ್ತಿದ್ದಾರೆ. ಐಷಾರಾಮಿ ಹಡಗಿನಲ್ಲಿ ಡ್ರಗ್ ಪಾರ್ಟಿಗೆ ಸಂಬಂಧಿಸಿದಂತೆ ಎನ್ ಸಿ ಬಿ ಅಧಿಕಾರಿಗಳು ದಾಳಿ ಮಾಡಿ ಆರ್ಯನ್ ಖಾನ್ ಅವರನ್ನು ವಶಕ್ಕೆ ಪಡೆದಿದ್ದರು.
ಕಳೆದ ಬುಧವಾರ ವಿಶೇಷ ಕೋರ್ಟ್ ನಲ್ಲಿ ಆರ್ಯನ್ ಖಾನ್ ಜಾಮೀನು ವಿಚಾರಣೆಗೆ ಸಂಬಂಧಿಸಿದಂತೆ ವಾದ-ಪ್ರತಿ ವಾದ ನಡೆದಿತ್ತು. ಈ ವೇಳೆ ನ್ಯಾಯಾಲಯ ಜಾಮೀನು ಅರ್ಜಿ ತಿರಸ್ಕರಿಸಿ, ಆರ್ಯನ್ ಖಾನ್ ಮಾದಕ ವಸ್ತುವಿಗೆ ಸಂಬಂಧಿಸಿದ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆಂಬುದು ತೋರುತ್ತದೆ. ಅಲ್ಲದೆ ಡ್ರಗ್ ದಂಧೆಕೋರರ ಜೊತೆಗೆ ಸಂಬಂಧ ಹೊಂದಿರುವ ಬಗ್ಗೆ ಮೇಲ್ನೋಟಕ್ಕೆ ಕಂಡುಬರುತ್ತಿದೆ ಅಂತಾ ಹೇಳಿತ್ತು.