ಬೆಳಗಾಯಿತು ವಾರ್ತೆ |www.belagayithu.in
ಬಳ್ಳಾರಿ: ಈಶಾನ್ಯ ಪದವಿಧರ ಕ್ಷೇತ್ರದ ಚುನಾವಣೆಗೆ ನಾನು ಪಕ್ಷೇತರವಾಗಿ ಸ್ಪರ್ಧೆ ಮಾಡುತ್ತಿದ್ದು, ಬರುವ ಜೂನ್ ತಿಂಗಳಲ್ಲಿ ಚುನಾವಣೆ ನಡೆಯುತ್ತದೆ. ಹಾಗಾಗಿ ಸತತ ಏಳು ತಿಂಗಳಿಂದ ರಾಜ್ಯದ ಬಳ್ಳಾರಿ, ವಿಜಯನಗರ, ರಾಯಚೂರು, ಕೊಪ್ಪಳ ಜಿಲ್ಲೆಗಳಲ್ಲಿ ಪ್ರಚಾರ ಮಾಡಿದ್ದು, ಎಲ್ಲಾ ಜಿಲ್ಲೆಗಳಿಂದ ಉತ್ತಮ ಪ್ರತಿಕ್ರಿಯೆ ದೊರೆಯುತ್ತಿದೆ ಎಂದು ಈಶಾನ್ಯ ಪದವಿಧರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ನಾರಾ ಪ್ರತಾಪ್ ರೆಡ್ಡಿ ಅವರು ಹೇಳಿದರು.
ನಗರದ ಗಾಂಧಿನಗರದಲ್ಲಿರು ತಮ್ಮ ಕಚೇರಿಯಲ್ಲಿ ಭಾನುವಾರ ಆಯೋಜನೆ ಮಾಡಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.
ನಾನು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿತ್ತಿರುವುದರಿಂದ ನನಗೆ ಆಮ್ ಆದ್ಮಿ ಪಕ್ಷ, ಸಿಪಿಐ ಪಕ್ಷ, ಸಂಘ ಸಂಸ್ಥೆಗಳು ಮತ್ತು ಬೇರೆ ಬೇರೆ ಪಕ್ಷದವರು ಬೆಂಬಲ ಸೂಚಿಸಿದ್ದಾರೆ. ಎಲ್ಲ ಕಡೆಯು ಉತ್ತಮ ಪ್ರತಿಕ್ರಿಯೆ ದೊರೆಯುತ್ತಿದೆ. ಕಳೆದ ಬಾರಿ ಚುನಾವಣೆಯಲ್ಲಿ ಸ್ಪರ್ಧೆ ಮಾಡಿದಾಗ ಕೆಲವು ಅನ್ಯ ಮತಗಳಿಂದ ಸೋಲನ್ನು ಕಾಣಲಾಗಿತ್ತು. ಆದರೆ ಆಯ್ಕೆ ಯಾದವರು ಅಭಿವೃದ್ಧಿ ಮಾಡದೆ ಕೇವಲ ಅವರ ಏಳಿಗೆಯನ್ನು ಮಾಡಿಕೊಂಡಿದ್ದಾರೆ. ಹೀಗಾಗಿ ಈ ಬಾರಿ ನನ್ನನ್ನು ಬೆಂಬಲಿಸಲು ಜನ ತೀರ್ಮಾನ ಮಾಡಿದ್ದಾರೆ ಎಂದರು.