ಮುಂಬೈ: ಮಹಾರಾಷ್ಟç ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಮಹಾರಾಷ್ಟç ವಿಧಾನಸಭೆಯ ವಿಶ್ವಾಸಮತ ಪರೀಕ್ಷೆಯನ್ನು ಮುಂದೂಡಲಾಯಿತು.
ಇದೀಗ, ಮಾಜಿ ಸಿಎಂ ಹಾಗೂ ಬಿಜೆಪಿ ನಾಯಕ ದೇವೇಂದ್ರ ಫಡ್ನವೀಸ್ ಅವರು ನಾಳೆ ಮಹಾರಾಷ್ಟçದ ೨೦ನೇ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಮಹಾರಾಷ್ಟç ವಿಧಾನಸಭೆ ಕಾರ್ಯದರ್ಶಿ ರಾಜೇಂದ್ರ ಭಾಗವತ್ ಅವರು ರಾಜ್ಯಪಾಲರ ಆದೇಶದ ಪ್ರಕಾರ, ಈಗ ವಿಶ್ವಾಸಮತ ಪರೀಕ್ಷೆಯ ಅಗತ್ಯವಿಲ್ಲ, ಆದ್ದರಿಂದ ಇಂದಿನ ವಿಶೇಷ ಅಧಿವೇಶನವನ್ನು ಕರೆಯಲಾಗುವುದಿಲ್ಲ ಎಂದು ಎಲ್ಲಾ ರಾಜ್ಯದ ಶಾಸಕರಿಗೆ ತಿಳಿಸಿದ್ದಾರೆ.