ಕಾರ್ಮಿಕರ ದಿನಾಚರಣೆ ಅಂಗವಾಗಿ ಕಾರ್ಮಿಕರಿಗೆ ಗೌರವ

ಬೆಳಗಾಯಿತು ವಾರ್ತೆ| www.belagayithu.in
ಬಳ್ಳಾರಿ: ನಗರದ ಸಭಾಪತಿ ಬೀದಿಯಲ್ಲಿರುವ ಕಾರ್ಪೊರೇಷನ್ ಸೆಂಟರ್‌ನಲ್ಲಿ ಶ್ರೀ ಮಾತೃ ಮಹಿಳಾ ಮಂಡಳಿಯ ವತಿಯಿಂದ ಅಂತರರಾಷ್ಟ್ರೀಯ ಕಾರ್ಮಿಕರ ದಿನಾಚರಣೆಯನ್ನು ಸರಳವಾಗಿ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಕಾರ್ಮಿಕರಿಗೆ ಪೇಸ್ಟ್, ಬ್ರಷ್, ಗ್ಲುಕೋಸ್ ಹಾಗೂ ಹ್ಯಾಂಡ್‌ವಾಶ್ ವಿತರಣೆ ಮಾಡಿ ಅವರ ಸೇವೆಯನ್ನು ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಹೆಲ್ತ್ ಆಫೀಸರ್ ಸುಮಾ, ಕಮ್ಯುನಿಟಿ ಮೊಬೈಲ್ಸ್ ಸಿಬ್ಬಂದಿ ಹಾಗೂ ಹಲವಾರು ಕಾರ್ಮಿಕರು ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ಸಂಸ್ಥೆಯ ಕೆ. ಪುಷ್ಪ ಚಂದ್ರಶೇಖರ್ ಮಾತನಾಡಿ, ಕಾರ್ಮಿಕರ ಸೇವೆಗೆ ಮೌಲ್ಯ ಕಟ್ಟಲು ಸಾಧ್ಯವಿಲ್ಲ. ಅವರ ಪರಿಶ್ರಮದಿಂದಲೇ ಬಳ್ಳಾರಿ ನಗರದಲ್ಲಿ ಸ್ವಚ್ಛತೆ ಕಾಪಾಡಲಾಗುತ್ತಿದೆ ಎಂದು ಹೇಳಿದರು. ಜೊತೆಗೆ ಎಲ್ಲಾ ಕಾರ್ಮಿಕರಿಗೆ ಅಭಿನಂದನೆಗಳು ಹಾಗೂ ಧನ್ಯವಾದಗಳನ್ನು ಅರ್ಪಿಸಿದರು.




Related Articles

Stay Connected

53,222FansLike
67,874FollowersFollow
12,303FollowersFollow
105,423SubscribersSubscribe
- Advertisement -spot_img

Latest Articles