ಮೇ.11ರಂದು ಕಾರ್ಮಿಕರ ವಿಜಯೋತ್ಸವ ಕಾರ್ಯಕ್ರಮ


ಬೆಳಗಾಯಿತು ವಾರ್ತೆ| www.belagayithu.in
ಬಳ್ಳಾರಿ: ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ಸೇರಿದಂತೆ ವಿವಿಧ ವೃತ್ತಿಗಳಲ್ಲಿ ತೊಡಗಿರುವ ಕಾರ್ಮಿಕರಿಗಾಗಿ ಮೇ. 11ರಂದು ಕಾರ್ಮಿಕರ ವಿಜಯೋತ್ಸವ ಹಾಗೂ ಜಯಂತಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘದ ಅಧ್ಯಕ್ಷ ಶಿವಾನಾಯ್ಕ್ ತಿಳಿಸಿದ್ದಾರೆ.

ಮಾಧ್ಯಮದೊಂದಿಗೆ ಮಾತನಾಡಿದ ಅವರು, ನಗರದ ಜೋಳದ ರಾಶಿ ರಂಗಮಂದಿರದಲ್ಲಿ ಮೇ.11ರಂದು ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಕಟ್ಟಡ ಕಾರ್ಮಿಕರು, ಲಾರಿ ಚಾಲಕರು, ಕ್ಲೀನರ್‌ಗಳು, ಆಟೋ ಚಾಲಕರು, ಟೈಲರ್‌ಗಳು, ಎಲೆಕ್ಟ್ರಿಷಿಯನ್‌ಗಳು, ದ್ವಿಚಕ್ರ ವಾಹನ ಚಾಲಕರು, ಮೆಕಾನಿಕ್‌ಗಳು ಸೇರಿದಂತೆ ವಿವಿಧ ವೃತ್ತಿಯ ಕಾರ್ಮಿಕರು ಭಾಗವಹಿಸಲಿದ್ದಾರೆ.
ಕಾರ್ಯಕ್ರಮದ ಅಂಗವಾಗಿ ಕಾರ್ಮಿಕರಿಗೆ ವಿಶೇಷ ದಂತ ಚಿಕಿತ್ಸಾ ಶಿಬಿರ, ಆರೋಗ್ಯ ತಪಾಸಣೆ ಹಾಗೂ ಕಣ್ಣಿನ ಪರೀಕ್ಷೆಯನ್ನು ಉಚಿತವಾಗಿ ನಡೆಸಲಾಗುತ್ತದೆ. ಅಲ್ಲದೆ, ಕಣ್ಣಿನ ಸಮಸ್ಯೆಯಿಂದ ಬಳಲುತ್ತಿರುವ ಹಾಗೂ ಇತರೆ ನಿರ್ಮಾಣ ಕಾರ್ಮಿಕರಿಗೆ ಉಚಿತ ಕನ್ನಡಕ ವಿತರಣೆ ಮಾಡುವ ವ್ಯವಸ್ಥೆಯೂ ಕಲ್ಪಿಸಲಾಗಿದೆ ಎಂದ ಅವರು ಕಾರ್ಯಕ್ರಮದಲ್ಲಿ ಅನೇಕರಿಗೆ ಸನ್ಮಾನ ಮಾಡಲಾಗುವುದು. ಮತ್ತು ಶಾಲಾ ಮಕ್ಕಳಿಗೆ ಶಾಲಾ ಬ್ಯಾಗ್‌ಗಳನ್ನೂ ವಿತರಿಸಲಾಗುವುದು ಎಂದು ತಿಳಿಸಿದ್ದಾರೆ.

ಮುಂದುವರೆದು ಮಾತನಾಡಿದ ಅವರು, ಕಾರ್ಮಿಕ ಇಲಾಖೆ ವತಿಯಿಂದ ನೀಡಲಾಗುವ ಕಿಟ್‌ಗಳನ್ನು ಈವರೆಗೆ ಪಡೆಯದ ಕಾರ್ಮಿಕರು ಮಾತ್ರ ತಮ್ಮ ಲೇಬರ್ ಕಾರ್ಡ್ ಹಾಗೂ ಆಧಾರ್ ಕಾರ್ಡ್ ತರಬೇಕು ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ನಾರಾಯಣ್ ನಾಯ್ಕ್, ನರಸಪ್ಪ, ಮಾರಣ್ಣ, ದುರ್ಗೆಶ್, ಮಲ್ಲಿಕಾರ್ಜುನ, ತಿಪ್ಪೇಶ್ ನಾಯಕ್, ಲಕ್ಷ್ಮ ನಾಯ್ಕ್, ಹೋಬಿ ನಾಯ್ಕ್ ಇದ್ದರು.

Related Articles

Stay Connected

53,222FansLike
67,874FollowersFollow
12,303FollowersFollow
105,423SubscribersSubscribe
- Advertisement -spot_img

Latest Articles