ಬಳ್ಳಾರಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾಸ್ಪತ್ರೆ ಜಿಲ್ಲಾ ಸರ್ವೇಕ್ಷಣಾ ಘಟಕ ಹಾಗೂ ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಇವರ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಮಂಗಳವಾರ ವಿಶ್ವ ತಂಬಾಕು ರಹಿತ ದಿನಾಚರಣೆ ಕಾರ್ಯಕ್ರಮ ಕುರಿತು ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಜಾಗೃತಿ ಜಾಥಾ ಕಾರ್ಯಕ್ರಮವನ್ನು ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಸತೀಶ್ ಜೆ ಬಾಳಿ ಇವರು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳುಡಾ. ಎಚ್ ಎಲ್ ಜನಾರ್ಧನ್, ಜಿಲ್ಲಾ ಶಸ್ತ್ರಚಿಕಿತ್ಸಕರಾದ ಡಾ. ಬಸವರೆಡ್ಡಿ, ಪ್ರಾಂಶುಪಾಲರಾದ ಡಾ. ಗುರುನಾಥ್ ಚೌಹಾನ್, ಡಾ.ಅನಿಲ್ ಕುಮಾರ್, ಡಾ. ಅಬ್ದುಲ್ಲಾ, ಡಾ. ಇಂದ್ರಾಣಿ ಸೇರಿದಂತೆ ನರ್ಸಿಂಗ್ ವಿದ್ಯಾರ್ಥಿಗಳು ಹಾಗೂ ಆಶಾ ಕಾರ್ಯಕರ್ತೆಯರು ಇದ್ದರು.