ಬೆಳಗಾಯಿತು ವಾರ್ತೆ
ಬಳ್ಳಾರಿ: ಪ್ರತಿಯೊಬ್ಬರ ಬದುಕು ಹಸನವಾಗಬೇಕಾದರೆ ಯೋಗ ತುಂಬಾ ಅಗತ್ಯ ವಾಗಿದೆ. ಯೋಗ ಎಂಬುವುದು ಮನುಷ್ಯ ಜೀವನದಲ್ಲಿ ಪ್ರಮುಖ ಅಂಶವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸಾರಿಗೆ ಸಚಿವರಾದ ಬಿ.ಶ್ರೀರಾಮುಲು ಅವರು ಹೇಳಿದರು.
ನಗರದ ಕೋಟೆ ಮಲ್ಲೇಶ್ವರ ದೇವಸ್ಥಾನ ಆವರಣದಲ್ಲಿ ಮಂಗಳವಾರ ಆಯೋಜಿಸಿದ್ದ 8ನೇ ಅಂತರ ರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮವನ್ನು ಉದ್ಗಾಟಿಸಿ ಅವರು ಮಾತನಾಡಿದರು.
ಯೋಗದಿಂದ ನಮ್ಮ ಬುದ್ದಿಶಕ್ತಿಯ ಹಿಡಿತವನ್ನು ಸಾದಿಸಬಹುದು. ಯೋಗದಿಂದ ಹಲವು ರೋಗಗಳನ್ನು ನಿವಾರಣೆ ಮಾಡಬಹುದಾಗಿದೆ.
ಹಾಗೂ ಇವತ್ತಿನ ಆಹಾರ ಪದ್ದತಿ ನಮ್ಮ ಆರೋಗ್ಯದ ಮೇಲೆ ಪರಿಣಾಮ ಬಿರುತ್ತದೆ ಎಂದರು.
ಪ್ರಧಾನಿ ಮೋದಿ ಅವರು 2014ರಲ್ಲಿ 170 ದೇಶದ ಸದಸ್ಯರು ಹೊಂದಿರುವ ಸದನದಲ್ಲಿ ಯೋಗದ ದಿನಾಚರಣೆಯನ್ನು ಘೋಷಣೆ ಮಾಡಿದ್ದಾರೆ ಎಂದು ಹೇಳಿದರು
ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆಯ ಮೇಯರ್ ಎಂ.ರಾಜೇಶ್ವರಿ, ಬುಡಾ ಅಧ್ಯಕ್ಷರಾದ ಪಿ.ಪಾಲಣ್ಣ, ಮಾಜಿ ಸಂಸದೆ ಜೆ.ಶಾಂತಾ, ಮಾಜಿ ಶಾಸಕ ಟಿ.ಎಚ್.ಸುರೇಶ್‍ಬಾಬು, ಅಪರ ಜಿಲ್ಲಾಧಿಕಾರಿಗಳಾದ ಮಂಜುನಾಥ ಪಿ.ಎಸ್, ಜಿಲ್ಲಾ ಪಂಚಾಯತ್ ಸಿಇಒ ಲಿಂಗಮೂರ್ತಿ, ಮಹಾನಗರ ಪಾಲಿಕೆ ಆಯುಕ್ತರಾದ ಪ್ರೀತಿ ಗೆಹ್ಲೋಟ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೈದುಲು ಅಡಾವತ್, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಅಂದಾನಪ್ಪ ವಡಗೇರಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಜನಾರ್ಧನ, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಎನ್.ಬಸರೆಡ್ಡಿ, ತಹಶೀಲ್ದಾರ ವಿಶ್ವನಾಥ ಅವರು ಸೇರಿದಂತೆ ಶಾಲಾ ಮಕ್ಕಳು ಮತ್ತು ಸಾರ್ವಜನಿಕರು, ಇತರರು ಭಾಗವಹಿಸಿದ್ದರು.
ಕಾರ್ಯಕ್ರಮದಲ್ಲಿ ಅಂದಾಜು 1500ಕ್ಕೂ ಹೆಚ್ಚು ಅಧಿಕ ಸಂಖ್ಯೆಯಲ್ಲಿ ವಿವಿಧ ಶಾಲಾ ಮತ್ತು ಕಾಲೇಜು ವಿದ್ಯಾರ್ಥಿಗಳು ಹಾಗೂ ಯೋಗಾಸಕ್ತರು ಸಾಮೂಹಿಕ ಯೋಗಾಭ್ಯಾಸದಲ್ಲಿ ಆಸಕ್ತಿಯಿಂದ ಭಾಗವಹಿಸಿದ್ದು ವಿಶೇಷವಾಗಿತ್ತು.