40.9 C
Bellary
Monday, April 22, 2024

Localpin

spot_img

ದಾಖಲೆ ಇಲ್ಲದೇ 50 ಸಾವಿರ ಮೇಲ್ಪಟ್ಟು ಹೆಚ್ಚಿನ ಹಣ ಕೊಂಡೊಯ್ಯುವಂತಿಲ್ಲ

ಬೆಳಗಾಯಿತು ವಾರ್ತೆ |www.belagayithu.in
ಬಳ್ಳಾರಿ:ಲೋಕಸಭಾ ಸಾರ್ವತ್ರಿಕ ಚುನಾವಣೆ 2024 ಸಂಬಂಧ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದ್ದು, 09-ಬಳ್ಳಾರಿ (ಪ.ಪಂ) ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಚುನಾವಣಾ ಆಯೋಗದ ನಿರ್ದೇಶನದಂತೆ ರೂ.50 ಸಾವಿರ ಮೇಲ್ಪಟ್ಟು ನಗದು ಹಣವನ್ನು ಸೂಕ್ತ ದಾಖಲೆಗಳಿಲ್ಲದೇ ತೆಗೆದುಕೊಂಡು ಹೋಗಲು ಮತ್ತು ಸಾಗಾಣಿಕೆ ಮಾಡಲು ಅವಕಾಶ ಇರುವುದಿಲ್ಲ. ದಾಖಲೆಗಳಿಲ್ಲದೇ ಸಾಗಾಣಿಕೆ ಮಾಡಿದ ನಗದು ಹಣವನ್ನು ಚುನಾವಣಾ ತಂಡಗಳು ಜಪ್ತಿ ಮಾಡಿ ಸಮಿತಿಗೆ ಹಾಜರುಪಡಿಸಿ ವರದಿ ಸಲ್ಲಿಸಲಾಗುತ್ತದೆ.
ಚುನಾವಣಾ ತಂಡದಿಂದ ನಗದು ಹಣವನ್ನು ಜಪ್ತಿ ಮಾಡಿದಲ್ಲಿ, ಸಾರ್ವಜನಿಕರು ಹಣ ಬಿಡುಗಡೆಗಾಗಿ ಮೇಲ್ಮನವಿಯನ್ನು ಸೂಕ್ತ ದಾಖಲೆಗಳೊಂದಿಗೆ ಜಿಲ್ಲಾ ಕುಂದು ಕೊರತೆಗಳ ಸಮಿತಿಯನ್ನು ಸಂಪರ್ಕಿಸಬಹುದು ಎಂದು ಲೋಕಸಭೆ ಸಾರ್ವತ್ರಿಕ ಚುನಾವಣೆಯ ಜಿಲ್ಲಾ ಕುಂದು ಕೊರತೆಗಳ ಸಮಿತಿಯ ಅಧ್ಯಕ್ಷರೂ ಆಗಿರುವ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ ಅವರು ತಿಳಿಸಿದ್ದಾರೆ.
ಸಂಪರ್ಕಿಸಬೇಕಾದ ಮೊಬೈಲ್ ಸಂಖ್ಯೆ:
ಲೋಕಸಭಾ ಸಾರ್ವತ್ರಿಕ ಚುನಾವಣೆ 2024ರ ಜಿಲ್ಲಾ ಕುಂದು ಕೊರತೆಗಳ ಸಮಿತಿಯ ಸಂಚಾಲಕರು ಹಾಗೂ ಮಹಾನಗರ ಪಾಲಿಕೆಯ ಮುಖ್ಯ ಲೆಕ್ಕಾಧಿಕಾರಿಗಳಾದ ನಾಗರಾಜು ಮತ್ತು ಅವರ 8618724433 ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

Stay Connected

53,222FansLike
67,874FollowersFollow
12,303FollowersFollow
105,423SubscribersSubscribe
- Advertisement -spot_img

Latest Articles